ರವಿ ಡಿ.ಚನ್ನಣ್ಣನವರ್ ವಿರುದ್ಧ ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ
ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರ ವಿರುದ್ಧ ಸಿಬಿಐ ತನಿಖೆ ಕೋರಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ಹೈಕೋರ್ಟ್‌ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ರವಿ ಡಿ. ಚೆನ್ನಣ್ಣ ಅವರ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿರುವ ವಕೀಲ ಜಗದೀಶ್ ಈ ಅರ್ಜಿ ಸಲ್ಲಿಕೆ ಮಾಡಿದ್ದು, ಸಂಬಂಧಿಕರ ಹೆಸರಿನಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಅಲ್ಲದೇ ಬೇನಾಮಿ ಹೆಸರಲ್ಲಿ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ. ಜೊತೆಗೆ ಪೋಷಕರ ಹೆಸರಿನಲ್ಲೂ ಅಪಾರ ಆಸ್ತಿ ಖರೀದಿಸಲಾಗಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ದೂರಿದ್ದಾರೆ.
ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಅರ್ಜಿಯನ್ನು ಬರೆದಿದ್ದು, ರವಿ ಡಿ.ಚನ್ನಣ್ಣವರ್ ವಿರುದ್ಧ ಸರ್ಕಾರ ತನಿಖೆ ನಡೆಸಲು ಹಿಂದೇಟು ಹಾಕಿದೆ. ಹೀಗಾಗಿ ಸಿಬಿಐ, ಇಡಿ ಯಿಂದ ನಡೆಸುವಂತೆ ಮನವಿ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ: ಹರೀಶ್ ರಾವತ್
25 ವರ್ಷದ ಯುವತಿಯನ್ನು ವಿವಾಹವಾಗಿ ಸುದ್ದಿಯಲ್ಲಿದ್ದ ಶಂಕರಣ ಆತ್ಮಹತ್ಯೆಗ ಶರಣು