ಮೊದಲ ಪಂದ್ಯದಲ್ಲೇ ಸೋಲನುಭವಿಸಿದ RCB - Mahanayaka
4:39 PM Saturday 21 - September 2024

ಮೊದಲ ಪಂದ್ಯದಲ್ಲೇ ಸೋಲನುಭವಿಸಿದ RCB

rcb
23/03/2024

ಚೆನ್ನೈ: ಮೊದಲ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲು ಕಂಡಿದೆ.

ಚೆನ್ನೈನಲ್ಲಿ ನಡೆದ ಐಪಿಎಲ್ 2024 ರ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಿತು. ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 173 ರನ್ ಗಳಿಸಿತು.

ಆರಂಭಿಕ ಆಟಗಾರರಾಗಿ ಆಗಮಿಸಿದ ವಿರಾಟ್ ಕೊಹ್ಲಿ 0 ಎಸೆತಗಳಲ್ಲಿ 21 ರನ್ ಗಳಿಸಿದರೆ, ಫಾಫ್ ಡು ಪ್ಲೆಸಿಸ್ 23 ಎಸೆತಗಳಲ್ಲಿ 35 ರನ್ ಗಳನ್ನು ಗಳಿಸಿ ತಂಡಕ್ಕೆ ನೆರವಾದರು. ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೂನ್ ಗ್ರೀನ್ ಸೇರಿದಂತೆ ಮಧ್ಯಮಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯ ತಂಡಕ್ಕೆ ಭಾರೀ ನಷ್ಟ ಉಂಟು ಮಾಡಿತು.


Provided by

ಅನುಜ್ ರಾವತ್ 25 ಎಸೆತಗಳಲ್ಲಿ 48 ರನ್ ಗಳಿಸಿ ತಂಡ 173 ರನ್ ಗಳಿಸಲು ನೆರವಾದರು. ದಿನೇಶ್ ಕಾರ್ತಿನ್ ಔಟ್ ಆಗದೇ 26 ಎಸೆತಗಳಲ್ಲಿ 38 ರನ್ ಗಳಿಸಿದರು. 174 ರನ್ ಗಳ ಗುರಿ ಬೆನ್ನಟ್ಟಿದ ಸಿಎಸ್ ಕೆ ತಂಡದ ಮೇಲೆ ಆರ್ ಸಿಬಿ ಬೌಲರ್ ಗಳು ಆರಂಭದಲ್ಲಿ ನಿಯಂತ್ರಣ ಸಾಧಿಸಿದರು.

ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ 15 ಎಸೆತಗಳಲ್ಲಿ 15 ರನ್ ರಚಿನ್ ರವೀಂದ್ರ 15 ಎಸೆತಗಳಲ್ಲಿ 37 ರನ್ ಗಳಿಸಿದರೆ, ಅಜಿಂಕ್ಯಾ ರೆಹಾನೆ 19 ಎಸೆತಗಳಲ್ಲಿ 27 ರನ್ ಡೇರಿಲ್ ಮಿಚೆಲ್ 18 ಎಸೆತಗಳಲ್ಲಿ 22 ರನ್ ಗಳಿಸಿದರು.

ಶಿವಂ ದುಬೆ 28 ಎಸೆತಗಳಲ್ಲಿ 34 ರನ್ ಗಳಿಸಿದರೆ, ರವೀಂದ್ರ ಜಡೇಜಾ 17 ಎಸೆತಗಳಲ್ಲಿ 25 ರನ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು.

ಇತ್ತೀಚಿನ ಸುದ್ದಿ