ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವು
ಬೆಂಗಳೂರು: ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕನ್ನಡದ ರಿಯಾಲಿಟಿ ಶೋ ನನ್ನಮ್ಮ ಸೂಪರ್ ಸ್ಟಾರ್ ಸ್ಪರ್ಧಿ ಸಮನ್ವಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
6 ವರ್ಷ ವಯಸ್ಸಿನ ಸಮನ್ವಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಸಮನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಬಾಲಕಿ ತಾಯಿ ಅಮೃತಾ ನಾಯ್ಡು ಗಂಭೀರ ಗಾಯಗೊಂಡಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಬಾಲಕಿ ಮೃತದೇಹವನ್ನು ಕಿಮ್ಸ್ ಗೆ ರವಾನಿಸಲಾಗಿದ್ದು, ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗಿಳಿ, ಕೌಜುಗ, ಆಮೆ, ಮೊಲ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್!
ಕಳ್ಳನನ್ನು 1 ಕಿ.ಮೀ. ದೂರ ಬೆನ್ನಟ್ಟಿ ಹಿಡಿದ ಪೊಲೀಸ್ | ವಿಡಿಯೋ ವೈರಲ್
ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಅತ್ಯಾಚಾರ!