ಯುಪಿಎಸ್ ಸಿ ಬದಲು ಆರ್ ಎಸ್ಎಸ್ ಮೂಲಕ ಸರ್ಕಾರಿ ಅಧಿಕಾರಿಗಳ ನೇಮಕಾತಿ; ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಅಟ್ಯಾಕ್
ಸರ್ಕಾರದ ಹಿರಿಯ ಹುದ್ದೆಗಳಿಗೆ ವ್ಯಕ್ತಿಗಳ ಒಳ ಪ್ರವೇಶದ ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಾಪಿತ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಕಾರ್ಯವಿಧಾನಗಳನ್ನು ಕಡೆಗಣಿಸಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ಎಸ್) ಮೂಲಕ ಅಧಿಕಾರಿಗಳನ್ನು ನೇಮಕ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
‘ಎಕ್ಸ್’ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ನರೇಂದ್ರ ಮೋದಿ ಅವರು ಕೇಂದ್ರ ಲೋಕಸೇವಾ ಆಯೋಗದ ಬದಲು ‘ರಾಷ್ಟ್ರೀಯ ಸ್ವಯಂಸೇವಕ ಸಂಘ’ ಮೂಲಕ ಸಾರ್ವಜನಿಕ ಅಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಅಕ್ರಮ ಪ್ರವೇಶಗಳ ಮೂಲಕ ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳ ಮೀಸಲಾತಿ ಹಕ್ಕುಗಳನ್ನು ಮಹತ್ವದ ಸ್ಥಾನಗಳಿಗೆ ಅಳಿಸಿಹಾಕಿದ್ದಾರೆ ಎಂದು ರಾಹುಲ್ ಗಾಂಧಿ ಪ್ರಧಾನಿಯನ್ನು ಟೀಕಿಸಿದ್ದಾರೆ.
ಇಂತಹ ಅಭ್ಯಾಸಗಳು ಮೀಸಲಾತಿ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಜೊತೆಗೆ ಅನಾನುಕೂಲಕರ ಹಿನ್ನೆಲೆಯ ಸಮರ್ಥ ವ್ಯಕ್ತಿಗಳಿಗೆ ಅವಕಾಶಗಳನ್ನು ಮೊಟಕುಗೊಳಿಸಬಹುದು ಎಂದು ಅವರು ವಾದಿಸಿದ್ದಾರೆ. ಸರ್ಕಾರಿ ನೇಮಕಾತಿಗಳಲ್ಲಿ ಸಂಭಾವ್ಯ ಕಾರ್ಪೊರೇಟ್ ಹಸ್ತಕ್ಷೇಪದ ಬಗ್ಗೆಯೂ ಕಳವಳ ವ್ಯಕ್ತಪಡಿಸಿದರು.
ಹಿರಿಯ ಅಧಿಕಾರಿ ವರ್ಗ ಸೇರಿದಂತೆ ದೇಶಾದ್ಯಂತ ಎಲ್ಲಾ ಉನ್ನತ ಹುದ್ದೆಗಳಲ್ಲಿ ದೀನದಲಿತರು ಈಗಾಗಲೇ ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸುವ ಬದಲು, ಪಾರ್ಶ್ವ ಪ್ರವೇಶದಿಂದಾಗಿ ಅವರನ್ನು ಉನ್ನತ ಸ್ಥಾನಗಳಿಂದ ಮತ್ತಷ್ಟು ಅಂಚಿಗೆ ತಳ್ಳಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth