ಮಚ್ಚು ಹಿಡಿದು ರೀಲ್ಸ್: ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತೆ ಅರೆಸ್ಟ್

ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಬೆಂಬಿಡದೇ ಕಾಡುತ್ತಿದೆ. ಇದೀಗ ಜಾಮೀನು ಷರತ್ತುಗಳನ್ನ ಉಲ್ಲಂಘಿಸಿದ ಆರೋಪದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್ ನನ್ನು ಬಸವೇಶ್ವರ ನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್ ಗೆ ಪೊಲೀಸರು ನೋಟಿಸ್ ನೀಡಿದ್ದರು. ರೀಲ್ಸ್ ಗೆ ಬಳಸಿದ ಮಚ್ಚು ಸಿಗದ ಹಿನ್ನೆಲೆ 2 ಬಾರಿ ನೋಟಿಸ್ ನೀಡಿದ್ದರು.
ಆದ್ರೆ ಪೊಲೀಸರ ತನಿಖೆಗೆ ರಜತ್ ಗೈರಾಗಿದ್ದು, ಈ ಹಿನ್ನೆಲೆ ಅಸಮಾಧಾನಗೊಂಡ ಕೋರ್ಟ್ ಎನ್ ಬಿಡಬ್ಲ್ಯೂ ಜಾರಿ ಮಾಡಿತ್ತು. ಕೋರ್ಟ್ ಸೂಚನೆಯಂತೆ ರಜತ್ ನನ್ನು ಬಂಧಿಸಲಾಗಿದೆ.
ಇದರ ಬೆನ್ನಲ್ಲೇ ವಿನಯ್ ಗೌಡಗೂ ಬಂಧನದ ಭೀತಿ ಎದುರಾಗಿದೆ. ಇಂದೇ ಪೊಲೀಸರು 24ನೇ ಎಸಿಎಂಎಂ ಕೋರ್ಟ್ ಗೆ ಇಬ್ಬರನ್ನೂ ಹಾಜರುಪಡಿಸಲಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: