ಲೈಂಗಿಕ ಸಂಪರ್ಕಕ್ಕೆ ನಿರಾಕರಣೆ: ಬಾಲಕನನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ

13 ವರ್ಷದ ಬಾಲಕನ ಮೇಲೆ ಇಬ್ಬರು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಆರೋಪಿಗಳಲ್ಲಿ ಓರ್ವನನ್ನು ಬಂಧಿಸಲಾಗಿದ್ದು, ರಂಝಾನ್ ಸಮಯದಲ್ಲಿ ತಮ್ಮ ಸಂಗಾತಿಗಳು ತಮ್ಮೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ.
ಮಾರ್ಚ್ 5 ರಂದು ಹದಿಹರೆಯದವರು ಜಿಮ್ ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿಗಳಾದ ಅಜರ್ ಮತ್ತು ಹುಸೇನಿ ಆತನನ್ನು ಅಪಹರಿಸಿ, ಕಾಡಿಗೆ ಕರೆದೊಯ್ದು, ಕಟ್ಟಿಹಾಕಿ ಬೆದರಿಕೆ ಹಾಕಿದ್ದಾರೆ ಎಂದು ಡಿಸಿಪಿ ಬ್ರಜೇಂದ್ರ ದ್ವಿವೇದಿ ತಿಳಿಸಿದ್ದಾರೆ.
ನಂತರ ಅವರು ಅವನ ಮೇಲೆ ಅತ್ಯಾಚಾರ ಎಸಗಿ, ಹಗ್ಗದಿಂದ ಕತ್ತು ಹಿಸುಕಿ, ಶವವನ್ನು ಬಾವಿಗೆ ಎಸೆದಿದ್ದಾರೆ ಎಂದು ಹುಸೈನಿ ಬಂಧನದ ನಂತರ ಪೊಲೀಸರಿಗೆ ತಿಳಿಸಿದ್ದಾನೆ. ಅಜರ್ ಇನ್ನೂ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ನಡೆಯುತ್ತಿದೆ.
ಬಂಧಿತ ಇಬ್ಬರು ಆರೋಪಿಗಳಲ್ಲಿ ಓರ್ವನಾದ ಹುಸೈನಿ, ಪವಿತ್ರ ರಂಜಾನ್ ತಿಂಗಳಲ್ಲಿ ತನಗೆ ಮತ್ತು ಅಜರ್ ಗೆ ತಮ್ಮ ಸಂಗಾತಿಗಳು ಲೈಂಗಿಕತೆಯನ್ನು ನಿರಾಕರಿಸಿದ್ದಾರೆ ಎಂದು ವಿಚಾರಣೆಯ ಸಮಯದಲ್ಲಿ ಪೊಲೀಸರಿಗೆ ಬಹಿರಂಗಪಡಿಸಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj