ಟ್ವಿಟ್ಟರ್ ನಲ್ಲಿ ಟ್ರೆಂಟ್  ಆದ ‘ರಿಜೆಕ್ಟ್ ‍ಬ್ರಾಹ್ಮಿನ್ ಟೆಕ್ಟ್ಸ್ ಬುಕ್’: ಚಕ್ರತೀರ್ಥ ಹಳೆಯ ಪೋಸ್ಟ್ ವೈರಲ್ - Mahanayaka

ಟ್ವಿಟ್ಟರ್ ನಲ್ಲಿ ಟ್ರೆಂಟ್  ಆದ ‘ರಿಜೆಕ್ಟ್ ‍ಬ್ರಾಹ್ಮಿನ್ ಟೆಕ್ಟ್ಸ್ ಬುಕ್’: ಚಕ್ರತೀರ್ಥ ಹಳೆಯ ಪೋಸ್ಟ್ ವೈರಲ್

rohith chakrathirtha
23/05/2022

ಬೆಂಗಳೂರು: ಶಿಕ್ಷಣ ತಜ್ಞನಲ್ಲದ ವ್ಯಕ್ತಿಗೆ ದ್ವಿತೀಯ ಪಿಯು ಇತಿಹಾಸ ಪಠ್ಯಪುಸ್ತಕ ಪರಿಷ್ಕರಣೆಯ ಹೊಣೆ ನೀಡಿರುವುದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಟ್ವಿಟ್ಟರ್ ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪಠ್ಯಪುಸ್ತಕರ ರಚನೆಯ ಗಂಧ ಗಾಳಿಗೊತ್ತಿಲ್ಲದ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕರ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಗಲೇ ರಿಜೆಕ್ಟ್ ‍ಬ್ರಾಹ್ಮಿನ್ ಟೆಕ್ಟ್ಸ್ ಬುಕ್ ಎನ್ನುವ ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿದ್ದು, ಪಠ್ಯ ಪುಸ್ತಕ ಪರಿಷ್ಕರಣೆ ವಿರುದ್ಧ ವ್ಯಾಪಕ ಆಕ್ರೋಶವಾಗಿದೆ. ಈ ನಡುವೆ, ರೋಹಿತ್ ಚಕ್ರತೀರ್ಥ ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ನಾಡಗೀತೆಯನ್ನು ಅವಹೇಳನಾಕಾರಿಯಾಗಿ ಬಿಂಬಿಸಿದ್ದಾರೆನ್ನಲಾಗಿರುವ ಸ್ಕ್ರೀನ್ ಶಾಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಂತಹ ವ್ಯಕ್ತಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ಮಾಡಿಸುತ್ತಿದ್ದೀರಾ? ನಿಮಗೆ ಬೇರೆ ಯಾರೂ ಸಿಕ್ಕಿಲ್ವಾ? ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಡಗೀತೆಗೆ ಅವಮಾನ ಮಾಡಿದ ವ್ಯಕ್ತಿಯಿಂದ ಪಠ್ಯಪುಸ್ತಕ ಪರಿಷ್ಕರಣ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಓದುವ ಪಠ್ಯ ಪುಸ್ತಕವನ್ನು ಶಿಕ್ಷಣ ತಜ್ಞರೇ ಇಲ್ಲದೇ ಪರಿಷ್ಕರಣೆ ಮಾಡಲಾಗುತ್ತಿದೆ. ಇದು ಸಮಾಜಕ್ಕೆ ಒಳ್ಳೆಯದ್ದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಎಲೆಕ್ಟ್ರಿಕ್ ಬೈಕ್‌ ನ ಬ್ಯಾಟರಿ ಚಾರ್ಜ್ ಮಾಡುವ ವೇಳೆ ಶಾಕ್ ತಗಲಿ ಯುವತಿ ಸಾವು

ಎಸ್ ಡಿಎಂ ಕಾಲೇಜಿನ ಕಾರ್ಯದರ್ಶಿ ಡಾ.ಬಿ.ಯಶೋವರ್ಮಾ ನಿಧನ

ಇವ್ರು ನೋಡಿದ್ರಾ? ಸುಮ್ ಸುಮ್ನೇ ಕ್ರಿಯೇಟ್ ಮಾಡ್ತಾರೆ: ವಿಪಕ್ಷಗಳ ವಿರುದ್ಧ ಈಶ್ವರಪ್ಪ ಕಿಡಿ

ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಸ್ಥರಿಗೆ 5 ಲಕ್ಷ ರೂ ಪರಿಹಾರ: ಬೊಮ್ಮಾಯಿ

ಕಾರಿನಲ್ಲೇ ಬೆಂಕಿ ಹಚ್ಚಿಕೊಂಡು ಯುವಕ ಯುವತಿ ಆತ್ಮಹತ್ಯೆಗೆ ಶರಣು!

ಇತ್ತೀಚಿನ ಸುದ್ದಿ