ಒಂದನೇ ತರಗತಿಗೆ ಮಕ್ಕಳ ಸೇರ್ಪಡೆ ವಯೋಮಿತಿ ಸಡಿಲಿಕೆ: ಸಚಿವ ಮಧು ಬಂಗಾರಪ್ಪ

16/04/2025
ಬೆಂಗಳೂರು: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ಸ್ವಲ್ಪ ಸಡಿಲಿಕೆ ಮಾಡಿದ್ದು, ಇಂದು ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯವಾಗುತ್ತದೆ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಆಗಿರಲಿದೆ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದರು.
ಎಲ್ ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ. ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: