ಹೃದಯಾಘಾತದಿಂದ ನಿಧನರಾದ ಪೊಲೀಸ್ ಕಾನ್ ಸ್ಟೇಬಲ್ ಕುಟುಂಬಕ್ಕೆ ಪರಿಹಾರ ವಿತರಿಸಿದ ಕಾಂಗ್ರೆಸ್ ನಾಯಕರು
ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಂಗಳೂರು ನಗರದ ಮಾಜಿ ಶಾಸಕ ಬಿ.ಎ.ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಹಸ್ತಾಂತರಿಸಿದರು.
ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟೆ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಮೃತರಾಗಿದ್ದರು.
ಚೆಕ್ ವಿತರಣೆ ವೇಳೆ ಮಾಜಿ ಶಾಸಕ ಮೊಯಿದೀನ್ ಬಾವಾ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ಷರೀಫ್ ಚೊಕ್ಕಬೆಟ್ಟು, ಜಲೀಲ್ ಬದ್ರಿಯ, ಎಸ್ ಸಿ ಎಸ್ ಟಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕೋಡಿಕಲ್, ಅಬೂಬಕರ್ ಪ್ಯಾರಡೈಸ್, ಪ್ರಹ್ಲಾದ್ ಮತ್ತಿತರರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw