ನ್ಯಾಯಾಲಯಕ್ಕೆ ಕರೆದೊಯ್ಯುವಾಗ ವಿಚಾರಣಾ ಕೈದಿ ಪರಾರಿ: ಈತ ಹತ್ತಾರು ಕಳವು ಕೇಸ್ ನ ಆರೋಪಿ!! - Mahanayaka

ನ್ಯಾಯಾಲಯಕ್ಕೆ ಕರೆದೊಯ್ಯುವಾಗ ವಿಚಾರಣಾ ಕೈದಿ ಪರಾರಿ: ಈತ ಹತ್ತಾರು ಕಳವು ಕೇಸ್ ನ ಆರೋಪಿ!!

chathradurga 3
04/08/2023

ಚಾಮರಾಜನಗರ: ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ತಮಿಳುನಾಡಿನ ಆಸನೂರು ಹೋಟೆಲ್ ಸಮೀಪ ನಡೆದಿದೆ.


Provided by

ಚಾಮರಾಜನಗರದ 25 ವರ್ಷದ ಯುವಕ ಪರಾರಿಯಾಗಿರುವ ಆರೋಪಿ. ದೇವಾಲಯ ಹುಂಡಿ ಕಳವು, ರಾಬರಿ ಸೇರಿದಂತೆ ಚಾಮರಾಜನಗರ ಗ್ರಾಮಾಂತರ ಠಾಣೆ, ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಈತನ ವಿತುದ್ದ ಹಲವು ಪ್ರಕರಣ ದಾಖಲಾಗಿತ್ತು. ಅದೇ ರೀತಿ, ತಮಿಳುನಾಡಿನ ಈರೋಡ್ ಜಿಲ್ಲಾ ವ್ಯಾಪ್ತಿಯಲ್ಲೂ ಈತನ ವಿರುದ್ಧ ಕಳವು ಪ್ರಕರಣಗಳು ದಾಖಲಾಗಿತ್ತು.

ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈರೋಡ್ ನ್ಯಾಯಾಲಯಕ್ಕೆ ಇಂದು ವಿಚಾರಣೆಗೆ ಹಾಜರಾಗುವ ಸಂದರ್ಭದಲ್ಲಿ ಆಸನೂರು ಬಳಿ ಹೋಟೆಲ್ ಬಳಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ.


Provided by

ಸದ್ಯ, ಚಾಮರಾಜನಗರ ಪೊಲೀಸರು ಆಸನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಹುಡುಕಾಟಕ್ಕೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ