ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದ ಕಾಂಗ್ರೆಸ್ ನಾಯಕಿ
ಹೈದರಾಬಾದ್: ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಹುಲ್ ಗಾಂಧಿಯವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದೇ ವೇಳೆ ತೆಲಂಗಾಣದ ಹೈದರಾಬಾದ್ ರಾಜಭವನ ಮುಂದೆ ಪ್ರತಿಭಟನೆ ವೇಳೆ ಕಾಂಗ್ರೆಸ್ ಮುಖಂಡೆಯೊಬ್ಬರು ಬಂಧಿಸಲು ಬಂದ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದ ಘಟನೆ ನಡೆದಿದೆ.
ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು, ತಮ್ಮನ್ನು ಬಂಧಿಸಲು ಬಂದಿದ್ದ ಮಹಿಳಾ ಪೊಲೀಸರ ಬಳಿ ನಿಂತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಕಾಲರ್ ಹಿಡಿದಿದ್ದು, ಇದರಿಂದಾಗಿ ಕೆಲಕಾಲ ಸ್ಥಳದಲ್ಲಿ ನೂಕುನುಗ್ಗಲು ಸೃಷ್ಟಿಯಾಯಿತು. ಈ ವೇಳೆ ಮಹಿಳಾ ಪೊಲೀಸರು ಕಾಲರ್ ಬಿಡಿಸಿದ್ದಾರೆ.
ಇನ್ನೂ ಹೈದರಾಬನಾದ್ ನಲ್ಲಿ ಪ್ರತಿಭಟನೆ ಹಿಂಸಾ ರೂಪ ತಳೆದಿದ್ದು, ರಸ್ತೆ ತಡೆ ನಡೆಸಿ ಟೈಯರ್ ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LSRN1q7jVDz3PsMb1GzrwE
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಧ್ಯಾಹ್ನ ಊಟಕ್ಕೆಂದು ಮನೆಗೆ ಬಂದಿದ್ದ ಒಂಟಿ ಮಹಿಳೆಯನ್ನು ಇರಿದು ಬರ್ಬರ ಹತ್ಯೆ!
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿ!
ಸಾಯಿ ಪಲ್ಲವಿ ಸತ್ಯ ಹೇಳಿದ್ದಾರೆ ಎಂದ ನಟಿ ರಮ್ಯಾ!
ಕೋಣೆಯ ಕರ್ಟನ್ ಸರಿಪಡಿಸುತ್ತಿದ್ದ ವೇಳೆ 5ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು
104 ಗಂಟೆಗಳ ಕಾರ್ಯಾಚರಣೆ ಬಳಿಕ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನ ರಕ್ಷಣೆ