ರೇಣುಕಾಚಾರ್ಯ ಸಹೋದರನ ಪುತ್ರನ ಮೃತದೇಹ ಕಾಲುವೆಯಲ್ಲಿ ಕಾರು ಸಹಿತ ಪತ್ತೆ!
ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ತುಂಗಾ ಕಾಲುವೆಯಲ್ಲಿ ಬಿಳಿ ಕಾರಿನಲ್ಲಿ ಚಂದ್ರಶೇಖರ್ ನ ಮೃತದೇಹ ಪತ್ತೆಯಾಗಿದೆ.
ಕಾರನ್ನು ಕಾಲುವೆಯಿಂದ ಎತ್ತಿದಾಗ ಕಾರಿನ ಏರ್ ಬ್ಯಾಗ್ ಓಪನ್ ಆಗಿರುವುದು ಕಂಡು ಬಂದಿದೆ. ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ನ ಮೃತದೇಹ ಪತ್ತೆಯಾಗಿದೆ.
ರೇಣುಕಾಚಾರ್ಯ ಸಹೋದರ ಎಂ.ಪಿ.ರಮೇಶ್ ಪುತ್ರ ಚಂದ್ರಶೇಖರ್ ಅಕ್ಟೋಬರ್ 30 ರಾತ್ರಿ 11.30 ರಿಂದ ನಾಪತ್ತೆಯಾಗಿದ್ದರು. ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ವಾಪಸ್ ಆಗಿದ್ದ. ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿದ್ದಾನೆ. 11.30 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿತ್ತು.
ಚಂದ್ರಶೇಖರ್ ಮೊಬೈಲ್ ಮಾತ್ರ ಹೊನ್ನಾಳಿ ಪಟ್ಟಣದ ಸರ್ಕಲ್ನಲ್ಲಿ ಸ್ವಿಚ್ ಆಫ್ ಆಗಿತ್ತು. ಎಷ್ಟೇ ಹುಡುಕಿದರೂ ಚಂದ್ರಶೇಖರ್ ಸುಳಿವು ಸಿಗದಿದ್ದಕ್ಕೆ ಆತಂಕಗೊಂಡ ಕುಟುಂಬಸ್ಥರು ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡಿರುವ ಪೊಲೀಸರು ಸಹ ಚಂದ್ರಶೇಖರ್ ಗಾಗಿ ತೀವ್ರ ಹುಡುಕಾಟ ನಡೆಸಿದ್ದರು.
ಇದೀಗ ಚಂದ್ರಶೇಖರ್ ಮೃತಪಟ್ಟ ಸುದ್ದಿ ರೇಣುಕಾಚಾರ್ಯ ಕುಟುಂಬಕ್ಕೆ ಬರಸಿಡಿಲಿನಂತೆ ಬಡಿದಿದೆ. ರೇಣುಕಾಚಾರ್ಯ ಅವರ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka