ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಗೆ ಪರ್ಯಾಯ ರಾಜಕೀಯ ಪಕ್ಷ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ | ಡಾ.ಎಂ.ವೆಂಕಟಸ್ವಾಮಿ
ತುಮಕೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಜಿಲ್ಲಾ ಶಾಖೆಯ ಕಾರ್ಯಕರ್ತರ ಕಾರ್ಯಾಗಾರ ತುಮಕೂರಿನ ಕನ್ನಡ ಭವನದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಾಗಾರವನ್ನು ಆರ್.ಪಿ.ಐ. &ಎಸ್.ಎಸ್.ಡಿ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಉದ್ಘಾಟಿಸಿದರು. ದಲಿತ ಸಂಘರ್ಷ ಸಮಿತಿಯ ರಾಜ್ಯ ಮುಖಂಡ ಮು. ತಿಮ್ಮಯ್ಯ, ಪಿವಿಸಿ(ಸಮತಾವಾದ) ರಾಜ್ಯಾಧ್ಯಕ್ಷ ಬಸವರಾಜು ಇಂಡ್ಲವಾಡಿ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಪಿಳ್ಳರಾಜು ಬೋಸಪ್ಪ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಜಿಲ್ಲಾ ಗೌರವಾಧ್ಯಕ್ಷ ರಾಮಯ್ಯ ಹಾಗೂ ಹಲವು ಚಿಂತಕರು ಮುಖಂಡರು ಕಾರ್ಯಾಗಾರದಲ್ಲಿ ಭಾಗವಹಿಸಿದರು.
ಇನ್ನೂ ಈ ಕಾರ್ಯಾಗಾರದ ಬಳಿಕ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಮುಂದಿ ಕಾರ್ಯಕ್ರಮಗಳ ಬಗ್ಗೆ ಮಹಾನಾಯಕ ಡಾಟ್ ಇನ್ ಜೊತೆಗೆ ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ, ಅಂತಿಮವಾಗಿ ಈ ಪ್ರಥಮ ಕಾರ್ಯಾಗಾರದಿಂದ ಮುಂದಿನ ಬೆಳವಣಿಗೆ ಭಾಗವಾಗಿ, ಮುಂದಿನ ತಿಂಗಳು ಅಕ್ಟೋಬರ್ 17ರಂದು ತುಮಕೂರು ಜಿಲ್ಲಾ ಕಾರ್ಯಕರ್ತರ ಸಮಾವೇಶವನ್ನು ತುಮಕೂರಿನ ಗುಬ್ಬಿ ವೀರಣ್ಣ ರಂಗಮಂಟಪದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಅದಕ್ಕೆ ಪೂರಕವಾಗಿ ತುಮಕೂರಿನ ಪ್ರತೀ ತಾಲೂಕು ಕೇಂದ್ರಗಳಲ್ಲಿಯೂ ಒಂದು ಕಾರ್ಯಾಗಾರಗಳನ್ನು ಮಾಡುವುದು, 100 ಜನ ಕಾರ್ಯಕರ್ತರನ್ನು ಸೇರಿಸಿ, ಇಂದಿನ ಕಾರ್ಯಾಗಾರದಲ್ಲಿ ಏನೆಲ್ಲ ನಿರ್ಧಾರಗಳನ್ನು ಕೈಗೊಳ್ಳಲಾಗಿದೆಯೋ ಅವುಗಳನ್ನು ಕಾರ್ಯಕರ್ತರಿಗೆ ತಲುಪಿಸಲಾಗುವುದು. ಅವರು, ಜಿಲ್ಲಾ ಮಟ್ಟದ ಸಮಾವೇಶಕ್ಕೆ ತಯಾರಾಗಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ. ತುಮಕೂರು ಜಿಲ್ಲಾ ಉಸ್ತುವಾರಿ ಕಿಟ್ಟಿ ಜಾಲಾ ಅವರು, ಈ ಎಲ್ಲ ತಾಲೂಕು ಕಾರ್ಯಕರ್ತರ ಕಾರ್ಯಾಗಾರಗಳನ್ನು ಮೇಲ್ವಿಚಾರಣೆ ಮಾಡಿಕೊಂಡು ಕಾರ್ಯಕ್ರಮವನ್ನು ಯಶಸ್ವಿ ಮಾಡಲು ತೀರ್ಮಾನಿಸಿದ್ದೇವೆ ಎಂದರು.
ಇಂದು ಅನೇಕ ಜಾತಿ ಜನಾಂಗದ ಮುಖಂಡರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಲಿಂಗಾಯತ, ವೀರಶೈವ, ಕುರುಬ, ಗೌಡ ಸಮಾಜ, ಮುಸ್ಲಿಮ್ ಸಮುದಾಯದವರು ಎಲ್ಲ ಸಮುದಾಯಗಳನ್ನೊಳಗೊಂಡ ಪಕ್ಷ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಎಂದ ಅವರು, ಇಂದಿನ ಕಾರ್ಯಾಗಾರದಲ್ಲಿ ಅನೇಕ ದಲಿತ, ಅಹಿಂದ ವರ್ಗಗಳ ಚಿಂತಕರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಈ ಕಾರ್ಯಾಗಾರ ನೀಲಿ ಬಾವುಟವನ್ನು ಪ್ರತಿ ತಾಲೂಕು, ಗ್ರಾಮ ಪಂಚಾಯತ್ ಮಟ್ಟದಲ್ಲಿ, ಪಟ್ಟಣ ಪಂಚಾಯತ್, ನಗರ ಸಭೆಗಳಲ್ಲಿ ಹಾರಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಟರಾಜು ಜಿ.ಎಲ್. ಅಧ್ಯಕ್ಷತೆಯಲ್ಲಿ, ಗೋಪಾಲ್ ಕಾರ್ಯಾಧ್ಯಕ್ಷತೆಯಲ್ಲಿ ಮತ್ತು ಪ್ರಧಾನ ಕಾರ್ಯದರ್ಶಿ ಸಮಕ್ಷಮದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿದೆ. ಮಹಿಳಾ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಇದರಿಂದಾಗಿ ಬಾಬಾ ಸಾಹೇಬರ ಪ್ರಬುಧ ಭಾರತ ಕಟ್ಟುವ ಭರವಸೆ ತುಮಕೂರು ಜಿಲ್ಲೆಯಲ್ಲಿ ಹುಟ್ಟಿಕೊಂಡಿದೆ. ಮುಂದಿನ ದಿನಗಳಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಗೆ ಪರ್ಯಾಯ ರಾಜಕಾರಣ ಮಾಡುವುದರಲ್ಲಿ ಯಶಸ್ವಿಯಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇನ್ನಷ್ಟು ಸುದ್ದಿಗಳು…
ಬಿಜೆಪಿ ಮತ್ತು ಆರೆಸ್ಸೆಸ್ ನವರು ನಕಲಿ ಹಿಂದೂಗಳು | ರಾಹುಲ್ ಗಾಂಧಿ ವಾಗ್ದಾಳಿ
ತೆನೆಇಳಿಸಿ ಕೈ ಹಿಡಿಯುತ್ತಾರಾ ಜೆಡಿಎಸ್ ನ ಮತ್ತೋರ್ವ ಶಾಸಕ?
6 ವರ್ಷದ ಬಾಲಕಿಯ ಅತ್ಯಾಚಾರ, ಹತ್ಯೆ ಆರೋಪಿಯನ್ನು ಎನ್ ಕೌಂಟರ್ ಮಾಡುತ್ತೇವೆ | ತೆಲಂಗಾಣ ಸಚಿವ ಬಹಿರಂಗ ಹೇಳಿಕೆ
ರಾಷ್ಟ್ರಧ್ವಜಕ್ಕೆ ಅಗೌರವ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲು
ಫ್ಲೈಓವರ್ ಮೇಲೆ ಬೈಕ್ ಗೆ ಡಿಕ್ಕಿ ಹೊಡೆದ ಕಾರು: 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಬೈಕ್ ಸವಾರರು
ಮಂಗಳೂರು: ನಿಫಾ ವೈರಸ್ ಶಂಕೆ ಇದ್ದ ಯುವಕನ ಪರೀಕ್ಷೆ ವರದಿ ನೆಗೆಟಿವ್ | ಆರೋಗ್ಯಾಧಿಕಾರಿ