ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಮ್ಮರ್ ಇಂಟರ್ನ್ ಶಿಪ್ ಗೆ ಅರ್ಜಿ ಆಹ್ವಾನ - Mahanayaka

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಮ್ಮರ್ ಇಂಟರ್ನ್ ಶಿಪ್ ಗೆ ಅರ್ಜಿ ಆಹ್ವಾನ

reserve bank of india
21/10/2024

Reserve Bank of India Summer Internship 2024:

ಭಾರತ ದೇಶದ ಕೇಂದ್ರ ಬ್ಯಾಂಕ್ ಆಗಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ದೇಶದ ಹಣಕಾಸು ನಿರ್ವಹಣೆಗಳಲ್ಲಿ ಪ್ರಮುಖ ಭಾಗವಾಗಿದೆ. ಇದರಲ್ಲಿ ಅರ್ಹ ಅಭ್ಯರ್ಥಿಗಳಿಗೆ 2024ರ ಸಮ್ಮರ್ ಇಂಟರ್ನ್ಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

 ಯಾರು ಅರ್ಜಿ ಸಲ್ಲಿಸಬಹುದು?

ವಾಣಿಜ್ಯ, ಕಾನೂನು, ಅರ್ಥಶಾಸ್ತ್ರ, ಹಣಕಾಸು, ಬ್ಯಾಂಕಿಂಗ್ ಎಕನಾಮೆಟ್ರಿಕ್ಸ್, ಮ್ಯಾನೇಜ್ಮೆಂಟ್ ಸ್ಟಾಟಿಟಿಕ್ಸ್  ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿಸಿರುವವರು ಅರ್ಜಿ ಸಲ್ಲಿಸಲು ಅರ್ಹರು. ಈ ಒಂದು ಇಂಟರ್ನ್ಶಿಪ್ ಗೆ ಒಟ್ಟು 125 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಏನಿದು ಆರ್‌ ಬಿಐ ಇಂಟರ್ನ ಷಿಪ್?

ಅಭ್ಯರ್ಥಿಗಳ ವೃತ್ತಿಯಲ್ಲಿ ಹೆಚ್ಚಿನ ಪರಿಣಿತಿ ನೀಡಲು ಹಾಗೂ ಅವರ ಕಾರ್ಯಕ್ಷಮತೆ ಹೆಚ್ಚಿಸಲು ಈ ಒಂದು ಇಂಟರ್ನ್ ಶಿಪ್ ಅನ್ನು ಆಯೋಜಿಸಲಾಗಿದೆ. 2025 ರ ಏಪ್ರಿಲ್ ತಿಂಗಳಿನಿಂದ ಇದು ಆರಂಭವಾಗಲಿದೆ.

ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ವಿಧಾನ :

ಅರ್ಜಿ ಸಲ್ಲಿಸಿದಂತಹ ಅರ್ಹ ಅಭ್ಯರ್ಥಿಗಳಿಗೆ ಆರ್‌ಬಿಐ ಕಚೇರಿಗಳಲ್ಲಿ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದರ ಒಂದು ಅಂತಿಮ ಆಯ್ಕೆ ಪಟ್ಟಿಯನ್ನು ಫೆಬ್ರುವರಿ ಅಥವಾ ಮಾರ್ಚ್ ತಿಂಗಳ ಅವಧಿಯಲ್ಲಿ ಪ್ರಕಟಿಸಲಾಗುತ್ತದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಸ್ಟೈಪೆಂಡ್ ಎಷ್ಟು?

ಆರ್‌ ಬಿಐ ಇಂಟರ್ನ್ ಶಿಪ್ ಗೆ ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 20,000ರೂ. ಸ್ಟೈಪೆಂಡ್ ನೀಡಲಾಗುವುದು.

ಅರ್ಜಿ ಸಲ್ಲಿಸುವ ಕುರಿತು :

ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಇದೇ ಡಿಸೆಂಬರ್ 15ನೇ ತಾರೀಕಿನ ಒಳಗಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿರಿ.

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ:  https://rbi.org.in/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ