ಪ್ರವಾದಿ ವಿರುದ್ಧ ಹೇಳಿಕೆ ವಿರುದ್ಧ ಸಿಡಿದೆದ್ದ ಮುಸ್ಲಿಮರ ಪ್ರತಿಭಟನೆ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಹೇಳಿದ್ದೇನು?
ನವದೆಹಲಿ: ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ವಿರೋಧಿಸಿ ಮುಸ್ಲಿಮರು ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
‘ಇಡೀ ಭಾರತವಿಂದು ಕಾಶ್ಮೀರದಂತೆ ಭಾಸವಾಗುತ್ತಿದೆ. ಇಡೀ ಭಾರತದಂತೆ ಕಾಶ್ಮೀರವೂ ಇರಬೇಕು ಎಂದು ಅಪೇಕ್ಷಿಸಿದ್ದೆವು. ಈ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಯಾವುದಾದರೂ ಸುಳಿವು ಇದೆಯೇ? ಮುಂದಿನ 48 ಗಂಟೆಗಳಲ್ಲಿ ಪರಿಸ್ಥಿತಿ ಹತೋಟಿಗೆ ಬರದಿದ್ದರೆ ಶಾ ಅವರು ಗೃಹ ಸಚಿವರಾಗಿ ಉಳಿಯುತ್ತಾರೆಯೇ? ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ’ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಟಿವಿ ಸಂವಾದವೊಂದರಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್‌ಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಆರಂಭಗೊಂಡ ಪ್ರತಿಭಟನೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉಕ್ರೇನ್ ಗಾಗಿ ಹೋರಾಡಿದ ವಿದೇಶಿಯರಿಗೆ ಮರಣದಂಡನೆ ನೀಡಿದ ರಷ್ಯಾ
ವಿಚಾರಣೆ ವೇಳೆ ನ್ಯಾಯಾಲಯದ ಕೊಠಡಿಗೆ ನೂರಾರು ಜಿರಳೆ ಬಿಟ್ಟ ಮಹಿಳೆ
ಪುತ್ರಿಯ ಬೀದಿ ರಂಪಾಟಕ್ಕೆ ಅರವಿಂದ್ ಲಿಂಬಾವಳಿ ಹೇಳಿದ್ದೇನು?
ನೂಪುರ್ ಶರ್ಮಾ ಪ್ರತಿಕೃತಿಗೆ ನಡು ರಸ್ತೆಯಲ್ಲಿ ಗಲ್ಲು! | ಹಿಂದೂ ಸಂಘಟನೆಗಳಿಂದ ಆಕ್ರೋಶ