ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ; ಆರ್ಜಿಕರ್ ನಲ್ಲಿ ಮತ್ತೊಂದು ದುರಂತ - Mahanayaka

ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ; ಆರ್ಜಿಕರ್ ನಲ್ಲಿ ಮತ್ತೊಂದು ದುರಂತ

02/02/2025

ಕೋಲ್ಕತಾದ ಆರ್ಜಿಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 20ರ ಹರೆಯದ ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಕಮರ್ಹತಿಯ ಇಎಸ್ಐ ಕ್ವಾರ್ಟರ್ಸ್ ನ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿ ಸ್ಥಳೀಯ ಇಎಸ್ಐ ಆಸ್ಪತ್ರೆಯಲ್ಲಿ ವೈದ್ಯೆಯಾಗಿರುವ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. ಪೊಲೀಸ್ ಮೂಲಗಳ ಪ್ರಕಾರ ವಿದ್ಯಾರ್ಥಿ ಖಿನ್ನತೆಯಿಂದ ಬಳಲುತ್ತಿದ್ದರು ಎಂದಿದ್ದಾರೆ.

ಘಟನೆ ನಡೆದ ರಾತ್ರಿ ವಿದ್ಯಾರ್ಥಿಯ ತಾಯಿ ಹಲವು ಬಾರಿ ಬಾಗಿಲು ತಟ್ಟಿದ್ದಾರೆ. ಯಾವುದೇ ಪ್ರತಿಕ್ರಿಯೆ ಬರದಿದ್ದಾಗ, ತಾಯಿ ಬಲವಂತವಾಗಿ ಬಾಗಿಲು ತೆರೆದಾಗ ತನ್ನ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ನೆರೆಹೊರೆಯವರ ಸಹಾಯದಿಂದ ಆಕೆಯ ತಾಯಿ ವಿದ್ಯಾರ್ಥಿನಿಯನ್ನು ಕಮರ್ಹತಿಯ ಇಎಸ್ಐ ಆಸ್ಪತ್ರೆಯ ತುರ್ತು ವಾರ್ಡ್ ಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ವೈದ್ಯರು ಅವಳು ಮೃತಪಟ್ಟಿದ್ದಾಳೆ ಎಂದು ಘೋಷಿಸಿದ್ದಾರೆ. ನಂತರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕಮರ್ಹತಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ