ರಿಕ್ಷಾ ಚಾಲಕನಿಗೆ ಮಹಿಳೆಯಿಂದ ಲೈಂಗಿಕ ಕಿರುಕುಳ: ವಿಡಿಯೋ ವೈರಲ್ - Mahanayaka
11:32 PM Saturday 21 - September 2024

ರಿಕ್ಷಾ ಚಾಲಕನಿಗೆ ಮಹಿಳೆಯಿಂದ ಲೈಂಗಿಕ ಕಿರುಕುಳ: ವಿಡಿಯೋ ವೈರಲ್

delhi
17/10/2023

ದೆಹಲಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಸುದ್ದಿಗಳ ನಡುವೆಯೇ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಮಹಿಳೆಯೋರ್ವಳು ಪುರುಷ ಸೈಕಲ್ ಆಟೋ ಚಾಲಕನೋರ್ವನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ದೆಹಲಿಯ ಜನನಿಬಿಡ ಪ್ರದೇಶದಲ್ಲೇ ಈ ಘಟನೆ ನಡೆದಿದ್ದು, ಮಹಿಳೆಯೊಬ್ಬಳು ಆಟೋ ರಿಕ್ಷಾ ಚಾಲಕನನ್ನು ಅನುಚಿತವಾಗಿ ಸ್ಪರ್ಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳೆಯು ಸಾರ್ವಜನಿಕವಾಗಿ ರಿಕ್ಷಾ ಚಾಲಕನನ್ನು ಅನುಚಿತವಾಗಿ ಸ್ಪರ್ಶಿಸಿ ಲೈಂಗಿಕತೆಗೆ  ಪ್ರೇರೇಪಿಸುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.


Provided by

ಕಾರಿನೊಳಗೆ ಕುಳಿತಿರುವವರು ಈ ದೃಶ್ಯವನ್ನು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ, ಮಹಿಳೆಯ ಅಸಹ್ಯಕರ ಕೃತ್ಯಕ್ಕೆ ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ.

 

ಇತ್ತೀಚಿನ ಸುದ್ದಿ