ಇ.ಡಿ.ಯವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ: ಸಿಎಂ ಸಿದ್ದರಾಮಯ್ಯ - Mahanayaka
7:49 PM Wednesday 4 - December 2024

ಇ.ಡಿ.ಯವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

siddaramaiah
04/12/2024

ಬೆಂಗಳೂರು: ಹೈಕೋರ್ಟ್ ನಲ್ಲಿ ನಮ್ಮ‌ ಅರ್ಜಿ ವಿಚಾರಣೆಗೆ ಬರುವ ಹಿಂದಿನ‌ ದಿನ ಇ.ಡಿ ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ. ಇ.ಡಿ ಯವರು ತನಿಖೆ ನಡೆಸುತ್ತಿದ್ದಾರೆ.

ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು, ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಕೆ.ಆರ್.ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದರು.

ಡಿಸೆಂಬರ್ 24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ಇ.ಡಿ ಯವರು ಲೋಕಾಯುಕ್ತಕ್ಕೆ ವರದಿ ನೀಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದು ಅವರು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ