ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ: ದೂರು -ಪ್ರತಿ ದೂರು ದಾಖಲು - Mahanayaka
2:23 AM Wednesday 5 - February 2025

ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಟಾಪಟಿ: ದೂರು –ಪ್ರತಿ ದೂರು ದಾಖಲು

moidin bava
10/05/2023

ಮಾಜಿ ಶಾಸಕ, ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಜಟಾಪಟಿ ನಡೆದ ಘಟನೆ ಮಂಗಳೂರಲ್ಲಿ ವರದಿಯಾಗಿದ್ದು, ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು–ಪ್ರತಿ ದೂರು ದಾಖಲಾಗಿದೆ.

ಹಲ್ಲೆಗೊಳಗಾದ ನಿಝಾಮ್ ಹಾಗೂ ಹಶೀರ್ ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನಿನ್ನೆ ರಾತ್ರಿ ಮೊಯ್ದಿನ್ ಬಾವಾ ಅವರು ಕಾರಿನಲ್ಲಿ ಮತದಾರರಿಗೆ ಹಂಚಲು ಹಣ ತಂದಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾರನ್ನು ತಡೆದಾಗ, ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.

ಈ ಸಂಬಂಧ ಎರಡೂ ಗುಂಪಿನವರು ದೂರು –ಪ್ರತಿದೂರು ಸಲ್ಲಿಸಲು ಬಜ್ಪೆ ಪೊಲೀಸ್ ಠಾಣೆಗೆ ಬಳಿ ಬಂದಾಗ ಅಲ್ಲಿ ಮೊಯ್ದಿನ್ ಬಾವಾ ಬೆಂಬಲಿಗರ ತಂಡ  ಕಾಂಗ್ರೆಸ್ ಕಾರ್ಯಕರ್ತರಾದ ನಿಝಾಮ್ ಮತ್ತು ಹಶೀರ್ ಎಂಬವರಿಗೆ ಮೊಯ್ದಿನ್ ಬಾವಾ ಅವರ ಸಮ್ಮುಖದಲ್ಲೇ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಹಿಂದೆ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರ ಕಾರು ಚಾಲಕನಾಗಿದ್ದ ನಿಝಾಮ್,  ಇತ್ತೀಚೆಗಷ್ಟೇ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರಿಗೆ ಬೆಂಬಲ ಪ್ರಕಟಿಸಿದ್ದರು. ಇನ್ನು ಮೊಯ್ದಿನ್ ಬಾವಾ ಅವರಿಗೆ ನಿಝಾಮ್ ಮತ್ತು ಸಂಗಡಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ  ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಾಗಿದೆ. ಸದ್ಯ ಮೊಯ್ದಿನ್ ಬಾವಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂ‍ದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ