ಗಾಯಗೊಂಡು ಬಿದ್ದಿದ್ದ ರಿಷಬ್ ಪಂತ್ ಗೆ ಸಹಾಯ ಮಾಡುವ ಬದಲು ಹಣ ದೋಚಿದ ಪಾಪಿಗಳು!
ರಿಷಬ್ ಪಂತ್ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ನರಳುತ್ತಿದ್ದರೆ, ಅಲ್ಲಿಗೆ ಬಂದ ಕೆಲವು ಯುವಕರು ನೆರವು ಮಾಡುವ ಬದಲು ಅವರ ಬ್ಯಾಗ್ ನಲ್ಲಿದ್ದ ಹಣ ಕದ್ದು ಪರಾರಿಯಾದ ಘಟನೆ ನಡೆದಿದೆ.
ರೂರ್ಕಿಯಲ್ಲಿರುವ ಮನೆಗೆ ತೆರಳುತ್ತಿದ್ದ ರಿಷಬ್ ಪಂತ್ ಅವರಿಗೆ ಅಪಘಾತವಾಗಿತ್ತು. ಈ ವೇಳೆ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಅವರಿಗೆ ನೆರವು ಮಾಡುವ ಬದಲು ಅವರ ಬ್ಯಾಗ್ ನಲ್ಲಿದ್ದ ಹಣ ದೋಚಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇನ್ನೂ ರಿಷಬ್ ಪಂತ್ ಅವರು ಸದ್ಯ ಅಪಾಯದಿಂದ ಚೇತರಿಸಿಕೊಂಡಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಸಂತಸ ನೀಡಿದೆ. ರಿಷಬ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw