ಕರಾವಳಿ ಮೂಲದ ದಂಪತಿಯ ಮಗು ರಿಯಾದ್ ನಲ್ಲಿ ಅಪಘಾತಕ್ಕೆ ಬಲಿ!
24/05/2021
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪುರಸಭಾ ವ್ಯಾಪ್ತಿ ಕಲ್ಲಬೆಟ್ಟು ಮೂಲದ ದಂಪತಿಯ ಮಗು ರಿಯಾದ್ ನಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದೆ.
ಕಲ್ಲಬೆಟ್ಟು ಗಂಟಾಲ್ಕಟ್ಟೆ ಮೂಲದ ಆದಿಲ್ ದಂಪತಿ ರಿಯಾದ್ ನಲ್ಲಿ ವಾಸವಾಗಿದೆ. ಆದಿಲ್ ಅವರು ಟ್ರಾವೆಲ್ ಏಜೆನ್ಸಿ ಹೊಂದಿದ್ದಾರೆ. ಅವರ ಕುಟುಂಬ ತಮ್ಮ ಕಾ ರಿನಲ್ಲಿ ದಮ್ಮಾಮ್ ಗೆ ತೆರಳಿತ್ತು. ಕೆಲಸ ಮುಗಿಸಿ ರಿಯಾದ್ ಗೆ ವಾಪಾಸಾಗುತ್ತಿದ್ದಾಗ ಆದಿಲ್ ಚಲಾಯಿಸುತ್ತಿದ್ದ ಕಾರು ಪಲ್ಟಿಯಾಗಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಒಂದು ವರ್ಷದ ಗಂಡು ಮಗು ಓವೈಸಿ ಆದಿಲ್ ಗೆ ಗಂಭೀರ ಗಾಯವಾಗಿತ್ತು. ಚಿಕಿತ್ಸೆಗಾಗಿ ರಿಯಾಜ್ ನ ನ್ಯಾಶನಲ್ ಗಾರ್ಡ್ ಆಸ್ಪ ತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.