ಎಟಿಎಂನಿಂದ ಹಣ ಡ್ರಾ ಮಾಡಲು ಸಹಾಯ ಮಾಡುವ ನೆಪದಲ್ಲಿ ಮಹಿಳೆಯ 50 ಸಾವಿರ ದೋಚಿದ ಕಳ್ಳ!
ಹಾಸನ: ಹಣ ಡ್ರಾ ಮಾಡಲು ಸಹಕರಿಸುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ 50 ಸಾವಿರ ರೂಪಾಯಿ ವಂಚಿಸಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪದ್ಮ ಎಂಬ ಮಹಿಳೆ ಹಣ ಡ್ರಾ ಮಾಡಲು ಕರ್ಣಾಟಕ ಬ್ಯಾಂಕ್ ಎಟಿಎಂಗೆ ಬಂದಿದ್ದರು. ಈ ವೇಳೆ ಹಣ ಡ್ರಾ ಮಾಡಲು ಸಾಧ್ಯವಾಗದ ಹಿನ್ನೆಲೆ ವ್ಯಕ್ತಿಯೊಬ್ಬನ ಸಹಾಯ ಕೇಳಿದ್ದಾರೆ.
ಆ ವ್ಯಕ್ತಿ ಮಹಿಳೆಗೆ 10 ಸಾವಿರ ಹಣ ಡ್ರಾ ಮಾಡಿಕೊಟ್ಟು ಖಾತೆ ಖಾಲಿಯಿದೆ ಎಂದು ಹೇಳಿ ತೆರಳಿದ್ದ. ಇದನ್ನು ನಂಬಿದ್ದ ಮಹಿಳೆ ಮನೆಗೆ ತೆರಳಿದ್ದರು. ಮನೆಗೆ ಬಂದು ಕೆಲವು ನಿಮಿಷಗಳ ಬಳಿಕ 50 ಸಾವಿರ ರೂಪಾಯಿ ನಿಮ್ಮ ಖಾತೆಯಿಂದ ಡ್ರಾ ಆಗಿದೆ ಎಂದು ಮೊಬೈಲ್ ಗೆ ಮೆಸೆಜ್ ಬಂದಿದೆ.
ಇದರಿಂದ ಗಾಬರಿಗೊಂಡು ಅವರು ಬ್ಯಾಂಕ್ ಗೆ ಹೋಗಿ ಪರಿಶೀಲನೆ ನಡೆಸಿದ ವೇಳೆ ಅಪರಿಚಿತ ವ್ಯಕ್ತಿ ಮಹಿಳೆಯ ಎಟಿಎಂ ಕಾರ್ಡ್ ನ್ನು ಬದಲಿಸಿ ತೆಗೆದುಕೊಂಡು ಹೋಗಿ ಬೇರೆ ಎಟಿಎಂನಿಂದ ಹಣ ಡ್ರಾ ಮಾಡಿ ವಂಚಿಸಿರುವುದು ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯ ಬಂಧನಕ್ಕೆ ಬಲೆಬೀಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: