ತಮ್ಮ ಖಾಸಗಿ ಫೋಟೋ ವೈರಲ್ ಆದ ಬಗ್ಗೆ ಸ್ಪಷ್ಟನೆ ನೀಡಿದ ರೋಹಿಣಿ ಸಿಂಧೂರಿ
ಬೆಂಗಳೂರು: ರೋಹಿಣಿ ಸಿಂಧೂರಿ ಹಾಗೂ ರೂಪಾ ಮೌದ್ಗಿಲ್ ಅವರ ನಡುವಿನ ಮುಸುಕಿನ ಗುದ್ದಾಟ ಇದೀಗ ಬೀದಿಗೆ ಬಂದಿದ್ದು, ರೂಪಾ ಅವರು ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಬಿಡುಗಡೆ ಮಾಡಿ ಹಲವು ಆರೋಪಗಳನ್ನು ಮಾಡಿದ್ದಾರೆ.
ಇನ್ನೂ ತಮ್ಮ ಫೋಟೋಗಳ ಬಗ್ಗೆ ಸ್ಪಷ್ಟನೆ ನೀಡಿರುವ ರೋಹಿಣಿ ಸಿಂಧೂರಿ, ನಾನು ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಫೋಟೋಗಳನ್ನು ಬಳಸಿ ತನ್ನನ್ನು ನಿಂದಿಸಿರುವುದಾಗಿ ಹೇಳಿದ್ದಾರೆ. ಜೊತೆಗೆ ತಾನು ಯಾವ ಅಧಿಕಾರಿಗಳಿಗೆ ಫೋಟೋ ಕಳುಹಿಸಿದ್ದೆ ಅನ್ನೋದನ್ನು ರೂಪಾ ಬಹಿರಂಗಗೊಳಿಸಬೇಕು ಎಂದು ಸವಾಲು ಹಾಕಿದ್ದಾರೆ. ಜೊತೆಗೆ ಕಾನೂನು ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ.
ಇನ್ನೂ ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿರುವ ರೂಪಾ, ಒಬ್ಬರಲ್ಲ, ಇಬ್ಬರಲ್ಲ, ನಾಲ್ವರು ಪುರುಷ ಐಎಎಸ್ ಅಧಿಕಾರಿಗಳಿಗೆ ಈ ಫೋಟೋಗಳನ್ನು ರೋಹಿಣಿ ಕಳುಹಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw