ಮರು ಆಗಮನ: ಪರ್ತ್ ನಲ್ಲಿ ಟೀಂ ಇಂಡಿಯಾಗೆ ಮರು ಸೇರಲಿರುವ ರೋಹಿತ್ ಶರ್ಮಾ
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮುಂಬರುವ ದಿನಗಳಲ್ಲಿ ಆಸ್ಟ್ರೇಲಿಯಾಕ್ಕೆ ಹಾರಲು ಸಜ್ಜಾಗಿದ್ದಾರೆ ಮತ್ತು ಪರ್ತ್ ನಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ತಿಂಗಳ ಆರಂಭದಲ್ಲಿ ಎರಡನೇ ಮಗುವಿನ ಜನನದಿಂದಾಗಿ ರೋಹಿತ್ ಆಸ್ಟ್ರೇಲಿಯಾಕ್ಕೆ ತೆರಳುವುದು ವಿಳಂಬವಾಗಿತ್ತು.
ನವೆಂಬರ್ 15 ರಂದು ಗಂಡು ಮಗುವಿಗೆ 37 ವರ್ಷದ ರೋಹಿತ್ ಶರ್ಮಾ ಪತ್ನಿ ಜನ್ಮ ನೀಡಿದ್ದರು. ನವೆಂಬರ್ 22 ರ ಶುಕ್ರವಾರ ಪರ್ತ್ ನಲ್ಲಿ ಪ್ರಾರಂಭವಾಗುವ ಐದು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ನಿಂದ ಹೊರಗುಳಿಯಲಿದ್ದಾರೆ. ಓಪಸ್ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್ ನ ಮೂರನೇ ದಿನವಾದ ನವೆಂಬರ್ 24 ರಂದು ಪರ್ತ್ ನಲ್ಲಿ ಅವರು ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಕ್ರಿಕ್‌ಬಝ್ ವರದಿ ತಿಳಿಸಿದೆ.
ರೋಹಿತ್ ಅವರು ಭಾನುವಾರ ತಂಡವನ್ನು ಸೇರಿಕೊಳ್ಳುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ರೋಹಿತ್ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ಮೊದಲ ಟೆಸ್ಟ್ ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನ ವೇಗಿ, ನಿಯಮಿತ ನಾಯಕನೊಂದಿಗೆ ಸಂಪರ್ಕದಲ್ಲಿರುವುದರ ಬಗ್ಗೆ ಮಾತನಾಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj