ರೌಡಿಶೀಟರ್ ಕಾಲಿಗೆ ಫೈರಿಂಗ್: ಬಂಧನದ ವೇಳೆ ಪೊಲೀಸರಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದ ರೌಡಿಶೀಟರ್ - Mahanayaka
3:15 AM Thursday 12 - December 2024

ರೌಡಿಶೀಟರ್ ಕಾಲಿಗೆ ಫೈರಿಂಗ್: ಬಂಧನದ ವೇಳೆ ಪೊಲೀಸರಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದ ರೌಡಿಶೀಟರ್

chikkamagaluru
30/10/2023

ಚಿಕ್ಕಮಗಳೂರು: ಬಂಧಿಸಲು ಹೋದ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.

ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹೋಗದ ರೌಡಿಶೀಟರ್ ಪೂರ್ಣೇಶ್ ನನ್ನು ಬಂಧಿಸಲು ಪೊಲೀಸರು ಬಂದಿದ್ದರು. ಈ ವೇಳೆ ಪೂರ್ಣೇಶ್, ಪೊಲೀಸ್  ಪೇದೆ ಮಂಜುನಾಥ್ ಅವರಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಪೂರ್ಣೇಶ್ ಕಾಲಿಗೆ ಪಿ.ಎಸ್.ಐ.‌ದಿಲೀಪ್ ಕುಮಾರ್ ಫೈರಿಂಗ್ ಮಾಡಿದ್ದಾರೆ.

ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹೋಗದ ಪೂರ್ಣೇಶ್ ಕಾಡು, ಕಾಫಿತೋಟ, ದೊಡ್ಡ-ದೊಡ್ಡ ಮರಗಳ ಮೇಲೆ ಮಲಗುತ್ತಿದ್ದ. ಈತನನ್ನು ಪತ್ತೆ ಮಾಡಿದ ಪೊಲೀಸರು, ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಸದ್ಯ ಪೊಲೀಸರ ಗುಂಡೇಟಿನಿಂದ ಗಾಯಗೊಂಡಿರುವ ಪೂರ್ಣೇಶ್ ನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರೌಡಿಯಿಂದ ಹಲ್ಲೆಗೊಳಗಾದ ಪೇದೆ ಮಂಜುನಾಥ್ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತೀಚಿನ ಸುದ್ದಿ