ಆರೆಸ್ಸೆಸ್, ಬಿಜೆಪಿ ಮೊದಲು ಕೈ ಹಾಕುವುದು ಶಿಕ್ಷಣ, ಇತಿಹಾಸದ ಕುತ್ತಿಗೆಗೆ: ದೇವನೂರು ಮಹದೇವ
ಮೈಸೂರು: ನನ್ನ ಕಥನವನ್ನ ಪಠ್ಯ ಪುಸ್ತಕಕ್ಕೆ ಬಳಸಲು ನೀಡಿದ್ದ ಅನುಮತಿಯನ್ನು ನಾನು ಹಿಂದೆಗೆದುಕೊಂಡಿದ್ದೇನೆ ಎಂದು ಪದ್ಮಶ್ರೀ ಪುರಸ್ಕೃತ ಸಾಹಿತಿ ದೇವನೂರು ಮಹದೇವ ಹೇಳಿದ್ದಾರೆ.
ಎಲ್.ಬಸವರಾಜು, ಎ.ಎನ್.ಮೂರ್ತಿ, ಪಿ.ಲಂಕೇಶ್, ಸಾರಾ ಅಬೂಬಕರ್ ಮೊದಲಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ. ಇದನ್ನು ಯಾರು ಕೈ ಬಿಟ್ಟಿದ್ದಾರೋ, ಅವರಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ ಬಗ್ಗೆ ಏನೇನೂ ಗೊತ್ತಿಲ್ಲ ಎಂದರ್ಥ ಎಂದವರು ಸರ್ಕಾರಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ, ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ. ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ, ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ! ಎಂದು ದೇವನೂರು ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.
ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ.ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ಬಂದಿದೆ. ಚಾತುರ್ವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈ ಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಅದೇ ನಡೆದಿದೆ ಎಂದು ದೇವನೂರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಹಿಳೆಯನ್ನು ಇರಿದು ಕೊಂದ ಕುರಿಗೆ ಮೂರು ವರ್ಷಗಳ ಜೈಲು ಶಿಕ್ಷೆ!
ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ: 11 ನವಜಾತ ಶಿಶುಗಳು ಸಜೀವ ದಹನ
ಮಸೀದಿಯಲ್ಲಿ ದೈವ ಸಾನಿಧ್ಯ ಇತ್ತು: ತಾಂಬೂಲ ಪ್ರಶ್ನೆಯಲ್ಲಿ ಜ್ಯೋತಿಷ್ಯ ಗೋಪಾಲಕೃಷ್ಣ ಪಣಿಕ್ಕರ್