ಚುನಾವಣೆಗೋಸ್ಕರ ಆರೆಸ್ಸೆಸ್, ವಿಎಚ್ ಪಿ ಬಗ್ಗೆ ಮಾತನಾಡುವುದು ಸರಿಯಲ್ಲ: ವಿಶ್ವಪ್ರಸನ್ನ ಸ್ವಾಮೀಜಿ - Mahanayaka
1:23 PM Thursday 12 - December 2024

ಚುನಾವಣೆಗೋಸ್ಕರ ಆರೆಸ್ಸೆಸ್, ವಿಎಚ್ ಪಿ ಬಗ್ಗೆ ಮಾತನಾಡುವುದು ಸರಿಯಲ್ಲ: ವಿಶ್ವಪ್ರಸನ್ನ ಸ್ವಾಮೀಜಿ

pejawar swamiji
23/10/2021

ಬಾಗಲಕೋಟೆ: ಚುನಾವಣೆ ಬಂದಾಗ ಆರೆಸ್ಸೆಸ್ (RSS), ವಿಶ್ವ ಹಿಂದೂ ಪರಿಷತ್(VHP) ಬಗ್ಗೆ ರಾಜಕೀಯ ನಾಯಕರು ಮಾತನಾಡುತ್ತಾರೆ. ಚುನಾವಣೆ ಮುಗಿದ ಮೇಲೆ ಅದು ತಣ್ಣಗಾಗುತ್ತದೆ. ಚುನಾವಣೆಗೋಸ್ಕರ ಆರೆಸ್ಸೆಸ್, ವಿಎಚ್ ಪಿ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು  ಪೇಜಾವರದ ವಿಶ್ವಪ್ರಸನ್ನ ತೀರ್ಥ(Pejawar Swamiji )ಸ್ವಾಮೀಜಿ ಹೇಳಿದರು.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು,  ಚುನಾವಣೆ ಬಂದಾಗ ಆರೆಸ್ಸೆಸ್ ಬಗ್ಗೆ ಮಾತನಾಡುವುದು ಯಾಕೆ? ಎಂದು ಪ್ರಶ್ನಿಸಿದರು. ಇಂತಹ ಮಾತುಗಳಿಂದ ಅವರೇ ಸಮಾಜದ ಮುಂದೆ ಸಣ್ಣವರಾಗುತ್ತಾರೆ ಎಂದು ಅವರು ಹೇಳಿದರು.

ಆರೆಸ್ಸೆಸ್ ಬಗ್ಗೆ ಮಾತನಾಡುತ್ತಿರುವುದು ಇದೇ ಮೊದಲಲ್ಲ, ಜನರು ಓಲೈಕೆ ರಾಜಕಾರಣಕ್ಕೆ ಮರುಳಾಗುವುದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಆರೆಸ್ಸೆಸ್ ನ್ನು ಸಮರ್ಥಿಸಿಕೊಂಡರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ದೆವ್ವದಂತೆ ವೇಷ ಧರಿಸಿ ಹೆದರಿಸಲು ಹೋದ ಯುವತಿಯ ದುರಂತ ಅಂತ್ಯ!

ತುಮಕೂರು: ಬಜರಂಗದಳದ ಬಂದ್ ಗೆ ತಡೆಯೊಡ್ಡಿದ ಬಿಜೆಪಿ | ಅಷ್ಟಕ್ಕೂ ನಡೆದ ಯಡವಟ್ಟೇನು?

“ರತ್ನನ್ ಪ್ರಪಂಚ” ವರ್ಣಿಸಲು ಪದಗಳೇ ಇಲ್ಲ | ಒಂದು ಒಳ್ಳೆಯ ಸಿನಿಮಾ ನೋಡಿದೆ: ಹಾಸನದ ಯುವಕ ಸಚಿನ್ ಸರಗೂರು

ಮೋದಿಯಿಂದಾಗಿ ಕಾಂಗ್ರೆಸ್ ಧೂಳೀಪಟವಾಯ್ತು, ಇನ್ನೂ ಕಾಂಗ್ರೆಸ್ ನ ಅಡ್ರೆಸ್ಸೆ ಇರಲ್ಲ | ಯಡಿಯೂರಪ್ಪ ವಾಗ್ದಾಳಿ

ರಾಜ್ಯದಲ್ಲಿ 378 ಕೊವಿಡ್ ಪ್ರಕರಣ ಪತ್ತೆ: 11 ಮಂದಿ ಸಾವು

ಇತ್ತೀಚಿನ ಸುದ್ದಿ