ಆರೆಸ್ಸೆಸ್ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಅಜ್ಞಾನ, ಭೀತಿ, ವೈಯಕ್ತಿಕ ಹತಾಶೆಯಾಗಿದೆ | ಬಿ.ವೈ.ವಿಜಯೇಂದ್ರ ಕಿಡಿ
ಬೆಂಗಳೂರು: ಬಿಜೆಪಿಯ ಮಾತೃ ಸಂಸ್ಥೆ ಆರೆಸ್ಸೆಸ್(RSS) ವಿರುದ್ಧ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಮುಗಿಬಿದ್ದಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ಕುಮಾರಸ್ವಾಮಿ ಅವರ ಅಭಿಪ್ರಾಯ ಸಂಘದ ಬಗ್ಗೆ ಅವರಿಗೆ ಇರುವ ಅಜ್ಞಾನ, ಭೀತಿ ಮತ್ತು ಅವರ ವೈಯಕ್ತಿಕ ಹತಾಶೆಯ ಅಭಿವ್ಯಕ್ತಿಯಾಗಿದೆ. ದೇಶಸೇವೆ, ಜನಸೇವೆ, ರಾಷ್ಟ್ರೀಯತೆಯ ಸಿದ್ದಾಂತಗಳ ಮೂರ್ತ ರೂಪವೇ ಸಂಘ. ದೇಶದ ಮೂಲೆ ಮೂಲೆಗಳಲ್ಲಿ ಈ ವಿಚಾರಧಾರೆಗಳನ್ನು ಒಪ್ಪಿದ ಕೋಟ್ಯಾಂತರ ಜನರಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಆರೆಸ್ಸೆಸ್ ಬಗ್ಗೆ ಕುಮಾರಸ್ವಾಮಿ ಅವರು ಹೆಚ್ ಡಿ ದೇವೇಗೌಡರ ಬಳಿ ಮಾಹಿತಿ ಪಡೆಯಬಹುದಿತ್ತು. ಆರ್ ಎಸ್ ಎಸ್ ಹೊಗಳಿದ ಹಿರಿಯಗೌಡರ ನುಡಿಗಳು, ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಇತಿಹಾಸದಲ್ಲಿ ದಾಖಲಾಗಿದೆ. ಪೂರ್ವಾಗ್ರಹವಿಲ್ಲದೇ ವಾಸ್ತವ ಪರಿಶೀಲಿಸಿದರೆ ಸಂಘದ ಬಗೆಗಿನ ಹೆಚ್‌ಡಿಕೆ ತಪ್ಪುಕಲ್ಪನೆ ದೂರಾಗಬಹುದು ಎಂದು ವಿಜಯೇಂದ್ರ ಹೇಳಿದ್ದಾರೆ.
ದೇಶ ಮೊದಲು ಎನ್ನುವ ಬದ್ಧತೆ ಬಿಜೆಪಿ ಪ್ರತಿಪಾದಿಸುತ್ತಿದೆ. ಇಲ್ಲಿ ಎಲ್ಲರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ಆದರೆ, ಜನಾದೇಶ ಪಡೆದು ಆಯ್ಕೆಯಾದ ಪಕ್ಷವನ್ನು, ಪ್ರಧಾನಿ, ಸಿಎಂ ಟೀಕಿಸುವ ಭರದಲ್ಲಿ ಜನಾದೇಶವನ್ನು ಪ್ರಶ್ನಿಸುತ್ತಿದ್ದೀರಿ. ಇದಕ್ಕೆ ಜನರೇ ಉತ್ತರಿಸುತ್ತಾರೆ ಎಂದು ವಿಜಯೇಂದ್ರ ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಮಾಟ ಮಂತ್ರದಿಂದ ನೆಮ್ಮದಿ ಪಡೆಯಲು ಹೋಗಿ 4.41 ಕೋಟಿ ರೂಪಾಯಿ ಕಳೆದುಕೊಂಡ ಮಹಿಳೆ
ಟಿಎಂಸಿ ಸೇರ್ಪಡೆಗೂ ಮುನ್ನ ಕೇಶಮುಂಡನ ಮಾಡಿ ಆತ್ಮಶುದ್ಧಿ ಮಾಡಿಕೊಂಡ ಬಿಜೆಪಿ ಶಾಸಕ!
ಅತ್ಯಾಚಾರ ನಡೆದು ಕೇವಲ 9 ದಿನಗಳಲ್ಲಿಯೇ ಅಪರಾಧಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ!
ಗಾಂಧಿ ಜಯಂತಿ ದಿನವೇ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ದೈಹಿಕ ಹಲ್ಲೆ
ಸಾವಿನ ಕೊನೆಯ ಕ್ಷಣದಲ್ಲಿ “ಅಪ್ಪಾ ಬೇಗ ಬನ್ನಿ” ಎಂದು ಮಗ ಹೇಳಿದ್ದ | ಮಗನ ಸಾವು ನೆನೆದು ಬಿಕ್ಕಿಬಿಕ್ಕಿ ಅತ್ತ ರೈತ
ಲಖೀಂಪುರ್ ಖೇರ್ ಸಚಿವನ ಪುತ್ರ ರೈತರನ್ನು ಕೆಣಕಿ, ಗುಂಡು ಹಾರಿಸಿದ್ದ | ಎಫ್ ಐಆರ್ ನಲ್ಲಿ ಉಲ್ಲೇಖ
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಗನ ಬರ್ಬರ ಹತ್ಯೆ | ತಾಯಿ ಹಾಗೂ ಆಕೆಯ ಪ್ರಿಯಕರ ಅರೆಸ್ಟ್
ಹಾನಗಲ್, ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್