ವಲಸೆ ಬಂದವರಿಗೆ ಸಚಿವ ಖಾತೆ: ಮಧ್ಯಪ್ರದೇಶದಲ್ಲಿ ರಾಜಕೀಯ ಗಲಾಟೆ; ರಾಜೀನಾಮೆ ಕೊಟ್ಟೆ ಬಿಟ್ರು ಪರಿಶಿಷ್ಟ ಜಾತಿ ಕಲ್ಯಾಣ ಸಚಿವರು
ಮಧ್ಯಪ್ರದೇಶದ ಪರಿಶಿಷ್ಟ ಜಾತಿ ಕಲ್ಯಾಣ ಸಚಿವ ನಗರ್ ಸಿಂಗ್ ಚೌಹಾಣ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸುವ ಬೆದರಿಕೆ ಒಡ್ಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರ ಮಾಡಿರುವ ರಾಮ್ ನಿವಾಸ್ ರಾವತ್ ರಿಗೆ ತಮ್ಮ ಅರಣ್ಯ ಮತ್ತು ಪರಿಸರ ಖಾತೆ ನೀಡಿದ್ದಕ್ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ಚೌಹಾಣ್, “ಈ ವಿಷಯವನ್ನು ಚರ್ಚಿಸಲು ನಾನು ದಿಲ್ಲಿಗೆ ತೆರಳುತ್ತಿದ್ದೇನೆ. ನಾನು ಹುದ್ದೆಯಲ್ಲಿ ಮುಂದಯವರಿಯಬಾರದು ಎಂದು ನನಗನ್ನಿಸುತ್ತಿದೆ. ಬಿಜೆಪಿ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ನನ್ನ ಪತ್ನಿ ಅನಿತಾ ಸಿಂಗ್ ಚೌಹಾಣ್ ಕೂಡಾ ರತ್ಲಮ್ ಸಂಸದ ಸ್ಥಾನವನ್ನು ತ್ಯಜಿಸಲಿದ್ದಾರೆ ಎಂದೂ ಚೌಹಾಣ್ ಬೆದರಿಕೆ ಒಡ್ಡಿದ್ದಾರೆ.
ಮಾಜಿ ಕಾಂಗ್ರೆಸ್ ಶಾಸಕ ಹಾಗೂ ವಿಜಯಪುರ್ ವಿಧಾನಸಭಾ ಕ್ಷೇತ್ರವನ್ನು ಆರು ಬಾರಿ ಪ್ರತಿನಿಧಿಸಿರುವ ರಾಮ್ ನಿವಾಸ್ ರಾವತ್, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎಪ್ರಿಲ್ 30ರಂದು ಬಿಜೆಪಿ ಸೇರ್ಪಡೆಯಾಗಿದ್ದರು. ಇದರ ಬೆನ್ನಿಗೇ ಅವರು ಅರಣ್ಯ ಮತ್ತು ಪರಿಸರ ಖಾತೆ ಸಚಿವರಾಗಿರುವುದು ಪಕ್ಷದ ಒಂದು ವಲಯದ ಅಸಮಾಧಾನಕ್ಕೆ ಕಾರಣವಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth