ರಷ್ಯಾ ದಾಳಿಗೆ ನಾಗರಿಕರು, ಸೈನಿಕರು ಸೇರಿ 137 ಮಂದಿ ಸಾವು: ಉಕ್ರೇನ್
ಕೀವ್: ರಷ್ಯಾ ಉಕ್ರೇನ್ ಸೇನಾ ನೆಲೆ ಹಾಗೂ ಪ್ರಮುಖ ನಗರಗಳ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ.
ಅವರು ಈ ಬಗ್ಗೆ ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದು, ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ. ಈವರೆಗೆ ಸೈನಿಕರು ಸೇರಿದಂತೆ 137 ಜನರು ಹತರಾಗಿದ್ದು, ಇನ್ನೂ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಒಡೆಸಾ ಪ್ರದೇಶದ ಜ್ಮಿನಿ ದ್ವೀಪದಲ್ಲಿರುವ ಎಲ್ಲ ಭದ್ರತಾ ಪಡೆಯ ಸಿಬ್ಬಂದಿಯನ್ನು ರಷ್ಯಾ ಹೊಡೆದುರುಳಿಸಿದೆ. ಅಲ್ಲದೇ ಆ ಪ್ರದೇಶವನ್ನು ರಷ್ಯಾ ವಶಕ್ಕೆ ಪಡೆದಿದೆ. ಯುದ್ಧದಲ್ಲಿ ಮೃತಪಟ್ಟ ಸೈನಿಕರನ್ನು ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಹುತಾತ್ಮರು ಎಂದು ಕರೆದಿದ್ದಾರೆ.
ತನ್ನ ದೇಶದ ಮೇಲೆ ದಾಳಿ ಮಾಡಿದ್ದ ರಷ್ಯಾ ವಿರುದ್ಧ ಏಕಾಂಗಿಯಾಗಿ ಹೋರಾಡಲಿದೆ ಎಂದು ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಹೇಳಿದ್ದಾರೆ. ಇತರೆ ರಾಷ್ಟ್ರಗಳು ರಷ್ಯಾ ಕ್ರಮವನ್ನು ಖಂಡಿಸಿದರೂ ನೇರವಾಗಿ ಯುದ್ಧದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ವೊಲೊಡಿಮಿರ್ ಜೆಲೆನ್ಸ್ಕಿ ತನ್ನ ಶತ್ರು ರಾಷ್ಟ್ರವನ್ನು ಒಂಟಿಯಾಗಿ ಎದುರಿಸಲಿದೆ ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉಕ್ರೇನ್ ನಲ್ಲಿ ಸಿಲುಕಿದ್ದಾರೆ ಕರ್ನಾಟಕದ ಮೂವರು ವಿದ್ಯಾರ್ಥಿಗಳು!
ಕೊಲೆಗಡುಕರ ಸಾವಿನ ನಂತರವೇ ಹರ್ಷನಿಗೆ ಶಾಂತಿ: ಪ್ರಮೋದ್ ಮುತಾಲಿಕ್
ಅಗ್ನಿ ಅವಘಡ: ಕಟ್ಟಡದಿಂದ ಜಿಗಿದು ಜೀವ ಉಳಿಸಿಕೊಂಡ ತಾಯಿ, ಮಗಳು
ರಷ್ಯಾ ಆಕ್ರಮಣ ಆರಂಭ: ಉಕ್ರೇನ್ ರಾಜಧಾನಿ, ನಗರಗಳಲ್ಲಿ ಭಾರಿ ಪ್ರಮಾಣದ ಸ್ಫೋಟ