ಉಕ್ರೇನ್ ನಲ್ಲಿ ಸಿಲುಕಿದ್ದಾರೆ ಕರ್ನಾಟಕದ ಮೂವರು ವಿದ್ಯಾರ್ಥಿಗಳು!
ಬೆಂಗಳೂರು: ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧ ನಡೆಯುತ್ತಿದ್ದು, ಇದೇ ವೇಳೆ ಕರ್ನಾಟಕದ ಕಲಬುರಗಿಯ ಓರ್ವಳು ವಿದ್ಯಾರ್ಥಿನಿ ಹಾಗೂ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ.
ಗುಲ್ಬರ್ಗಾ ವಿಶ್ವವಿದ್ಯಾಲಯದ ಬಯೋ ಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕಿ ಲಲಿತಾ ಜೊನ್ನ ಅವರ ಪುತ್ರಿ ಜೀವಿತಾ ಉಕ್ರೇನ್ ನ ಕಿವ್ ನಗರದಲ್ಲಿ ಸಿಲುಕಿದ್ದಾರೆ. ಉಕ್ರೇನ್ ನಲ್ಲಿ ಇವರು ಎಂಬಿಬಿಎಸ್ 7ನೇ ಸೆಮಿಸ್ಟರ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಸದ್ಯ ಇವರು ವಿಡಿಯೋ ಕಾಲ್ ಮೂಲಕ ತಮ್ಮ ತಾಯಿಯ ಜೊತೆಗೆ ಮಾತನಾಡಿದ್ದು, ತಾನು ಸುರಕ್ಷಿತವಾಗಿದ್ದೇನೆ ಎಂದು ತಿಳಿಸಿದ್ದಾರೆನ್ನಲಾಗಿದೆ.
ಇನ್ನೂ ಮಂಗಳೂರು ನಗರದ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದು, ನಗರದ ಪಡೀಲ್ ನಿವಾಸಿ ಮರ್ವಿನ್ ಡಿಸೋಜಾ ಅವರ ಪುತ್ರ ಕ್ಲೇಟನ್ ಡಿಸೋಜ ಮತ್ತು ಇನ್ನೊಬ್ಬರು ಉಕ್ರೇನ್ ನಲ್ಲಿ ಸಿಲುಕಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕೊಲೆಗಡುಕರ ಸಾವಿನ ನಂತರವೇ ಹರ್ಷನಿಗೆ ಶಾಂತಿ: ಪ್ರಮೋದ್ ಮುತಾಲಿಕ್
ಅಗ್ನಿ ಅವಘಡ: ಕಟ್ಟಡದಿಂದ ಜಿಗಿದು ಜೀವ ಉಳಿಸಿಕೊಂಡ ತಾಯಿ, ಮಗಳು
ರಷ್ಯಾ ಆಕ್ರಮಣ ಆರಂಭ: ಉಕ್ರೇನ್ ರಾಜಧಾನಿ, ನಗರಗಳಲ್ಲಿ ಭಾರಿ ಪ್ರಮಾಣದ ಸ್ಫೋಟ
ಕಾರಿನ ಗಾಜು ಒಡೆದು ಹಣ, ದುಬಾರಿ ವಾಚ್ ಕಳವು; 6 ತಿಂಗಳ ಬಳಿಕ ಆರೋಪಿ ಬಂಧನ