ಇಂದು ಮುಂಜಾನೆ ಉಕ್ರೇನ್‌ನಿಂದ ತವರಿಗೆ ಬಂದಿಳಿದ 250 ಭಾರತೀಯರು
ನವದೆಹಲಿ: 250 ಭಾರತೀಯ ನಾಗರಿಕರನ್ನು ಹೊತ್ತ ಎರಡನೇ ಏರ್ ಇಂಡಿಯಾ ವಿಮಾನ ನವದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ 2.45ಕ್ಕೆ ಬಂದು ತಲುಪಿದೆ.
ಉಕ್ರೇನ್ ನೆರೆದೇಶ ರೊಮೇನಿಯಾ ರಾಜಧಾನಿ ಬುಚಾರೆಸ್ಟ್ ನಗರದಿಂದ ಕಳೆದ ರಾತ್ರಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆಗಿತ್ತು. ರನ್‌ವೇ ಸ್ಪರ್ಶಿಸುತ್ತಿದ್ದಂತೆ ರಷ್ಯಾ-ಉಕ್ರೇನ್ ಸಂಘರ್ಷದಲ್ಲಿ ಸಿಲುಕಿ ಪ್ರಾಣಭಯದಿಂದ ಒದ್ದಾಡಿದ ಭಾರತೀಯ ನಾಗರಿಕರು ಅರೆಕ್ಷಣ ನಿಟ್ಟುಸಿರುಬಿಡುವಂತಾಯಿತು.
ಈ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಬಂದು ಭಾರತೀಯ ನಾಗರಿಕರಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಾತನಾಡಿದ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಭಾರತೀಯ ನಾಗರಿಕರಿಗೆ ಗುಲಾಬಿ ಹೂ ನೀಡಿ ತಾಯ್ನಾಡಿಗೆ ಆತ್ಮೀಯವಾಗಿ ಸ್ವಾಗತಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಉಕ್ರೇನ್ ಅಧ್ಯಕ್ಷರು ಹಾಗೂ ರಷ್ಯಾ ಸರ್ಕಾರದ ಜೊತೆ ನಿರಂತರ ಮಾತುಕತೆ ನಡೆಸಿದ್ದು, ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ದೇಶಕ್ಕೆ ಮರಳಿ ಕರೆತರುವ ಬಗ್ಗೆ ಸಂವಾದ ನಡೆದಿದೆ. ಇದಕ್ಕೆ ಅಹರ್ನಿಶಿ ಶ್ರಮಪಟ್ಟ ಏರ್ ಇಂಡಿಯಾ ಸಿಬ್ಬಂದಿಯನ್ನು ಅಭಿನಂದಿಸಿದರು.
ಏರ್ ಇಂಡಿಯಾ ಕ್ಯಾಪ್ಟನ್ ಅಂಚಿತ್ ಭಾರದ್ವಾಜ್ ಮಾತನಾಡಿ, ರೊಮೇನಿಯಾದಿಂದ ಟೆಹ್ರಾನ್ ಮತ್ತು ಪಾಕಿಸ್ತಾನದ ಮೂಲಕ ಸಾಗಿ ಬರಲು ನಮಗೆ ಏರ್ ಟ್ರಾಫಿಕ್ ಕಂಟ್ರೋಲ್(ಎಟಿಸಿ) ಮೂಲಕ ಉತ್ತಮ ಸಹಕಾರ ಸಿಕ್ಕಿತು. ನಾವು ಕೇಳದೆಯೇ ನಮಗೆ ನೇರಹಾದಿಯನ್ನು ಯಾವುದೇ ಅಡಚಣೆ ಇಲ್ಲದೆ ಕೊಟ್ಟಿದ್ದು, ಯಶಸ್ವಿಯಾಗಿ ಭಾರತಕ್ಕೆ ಆಗಮಿಸಲು ಸಾಧ್ಯವಾಯಿತು. ಇದು ನಮಗೆ ವಿಶೇಷ ಅನುಭವ ನೀಡಿದೆ ಎಂದು ಹೇಳಿದರು.
ಏರ್ ಇಂಡಿಯಾ ಕ್ಯಾಬಿನ್ ಕ್ರೂ ಇನ್‌ಚಾರ್ಜ್ ರಜನಿ ಪೌಲ್ ಪ್ರತಿಕ್ರಿಯಿಸಿ, ಯುಕ್ರೇನ್‌ನಿಂದ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತಂದಿದ್ದಕ್ಕೆ ನಮಗೆ ಹೆಮ್ಮೆ ಅನ್ನಿಸುತ್ತಿದೆ. ಕೆಲವು ವಿದ್ಯಾರ್ಥಿಗಳು ಸೂಚಿಸಿದ ಪಿಕ್ ಅಪ್ ಪಾಯಿಂಟ್‌ಗೆ ಲಗೇಜು ಸಮೇತ 9-10 ಕಿ.ಮೀ. ನಡೆದೇ ಬಂದರು. ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದು ಸಂತಸ ಹಂಚಿಕೊಂಡರು.
ಯುದ್ಧಪೀಡೀತ ಉಕ್ರೇನ್ ದೇಶದಿಂದ ಭಾರತೀಯ ವಿದ್ಯಾರ್ಥಿಗಳು, ನಾಗರಿಕರನ್ನು ಆಪರೇಷನ್ ಗಂಗಾ ಹೆಸರಿನಲ್ಲಿ ಭಾರತ ಸರ್ಕಾರ ವಾಪಸ್ ಕರೆಯಿಸಿಕೊಳ್ಳುತ್ತಿದೆ. ಇನ್ನು ಮೂರನೇ ಏರ್ ಇಂಡಿಯಾ ವಿಮಾನ ಹಂಗೇರಿಯ ಬುಡಾಪೆಸ್ಟ್ ನಗರದಿಂದ ಇಂದು ನವದೆಹಲಿಗೆ ಆಗಮಿಸಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಯಡಿಯೂರಪ್ಪ ಅವರಿಗೆ 80ನೇ ಹುಟ್ಟು ಹಬ್ಬದ ಸಂಭ್ರಮ: ರೈತರಿಗೆ ಉಚಿತ ಟ್ರ್ಯಾಕ್ಟರ್ ವಿತರಣೆ
ಕರ್ನಾಟಕದ 11 ವಿದ್ಯಾರ್ಥಿಗಳು ಉಕ್ರೇನ್ ನಿಂದ ವಾಪಸ್: ನಿಟ್ಟುಸಿರು ಬಿಟ್ಟ ಪೋಷಕರು
ಕಾವೇರಿ ನದಿ ದಾಟುವ ವೇಳೆ ದುರಂತ: ಹಲವು ಭಕ್ತರು ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ
ಸೀಮಂತ ಕಾರ್ಯಕ್ರಮ ವೇಳೆ ಅಡುಗೆ ಸಿಲಿಂಡರ್ ಸ್ಫೋಟ: ನಾಲ್ವರ ಸಾವು, 19 ಮಂದಿ ಗಂಭೀರ