ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಇನ್ನಿಲ್ಲ - Mahanayaka

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಇನ್ನಿಲ್ಲ

s m krishna
10/12/2024

S.M. Krishna passed away on December 10


Provided by

ಬೆಂಗಳೂರು:  ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವರಾಗಿರುವ ಎಸ್.ಎಂ.ಕೃಷ್ಣ (S.M.Krishna)ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ಅವರು ನಿಧನರಾಗಿದ್ದಾರೆ.

ಎಸ್.ಎಂ.ಕೃಷ್ಣ ಅವರು ತಮ್ಮ 92ನೇ ವರ್ಷದಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಮೊದಲು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದು, ಈ ವೇಳೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ತೊಂದರ ಕಾಣಿಸಿಕೊಂಡ ಹಿನ್ನೆಲೆ ಅವರನ್ನು  ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.  ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.


Provided by

1962ರಲ್ಲಿ ಮದ್ದೂರು ವಿಧಾನ ಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಎಸ್.ಎಂ.ಕೃಷ್ಣ ಗೆಲುವು ದಾಖಲಿಸಿದ್ದರು. ಈ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶ ಪಡೆದಿದ್ದರು.

ಶಾಸಕರಾಗಿ, ಸಂಸದರಾಗಿ ಮುಖ್ಯಮಂತ್ರಿಗಳಾಗಿ, ವಿದೇಶಾಂಗ ಸಚಿವರಾಗಿ, ರಾಜ್ಯಪಾಲರಾಗಿ ಅವರು ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ:

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ  ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು ಎಂದು ತಿಳಿಸಿದ್ದಾರೆ.

ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ  ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ