ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ

ಬೆಂಗಳೂರು: ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಘೋಷಿಸಿದ್ದು, ವಯಸ್ಸಿಗೆ ಬೆಲೆ ಕೊಟ್ಟು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಈ ವಿಚಾರ ತಿಳಿಸಿದ ಎಸ್.ಎಂ.ಕೃಷ್ಣ ತಮ್ಮ ರಾಜಕೀಯ ನಿವೃತ್ತಿಯನ್ನು ತಿಳಿಸಿದರು. ಈ ವೇಳೆ ತಮ್ಮ ರಾಜೀನಾಮೆ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯದಲ್ಲಿ ಯಾರೂ ಪಿಂಚಣಿ ನೀಡುವುದಿಲ್ಲ. ಹಾಗಾಗಿ ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆಯೇ ಇಲ್ಲ ಎಂದು ಹೇಳಿದರು.
ಈಗಾಲೇ ನನಗೆ 90 ವರ್ಷ. ವಯಸ್ಸಿನ ಬಗ್ಗೆ ಎಲ್ಲರಿಗೂ ಅರಿವು ಇರಬೇಕು. 90ರಲ್ಲಿ ನಾವು 50 ವರ್ಷದ ರೀತಿ ನಟನೆ ಮಾಡಲು ಸಾಧ್ಯವಿಲ್ಲ. ವಯಸ್ಸಿಗೆ ಬೆಲೆ ಕೊಟ್ಟು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw