ಎಸ್.ನಿಜಲಿಂಗಪ್ಪ ದೇಶ ಕಂಡ ಮುತ್ಸದ್ದಿ ರಾಜಕಾರಣಿಮುಖ್ಯ ಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಎಸ್. ನಿಜಲಿಂಗಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ನೀರಾವರಿಗೆ ಹೆಚ್ಚು ಆದ್ಯತೆ ನೀಡಿ, ಏಕೀಕರಣದ ನಂತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಮಾಡುವ ಇಚ್ಛಾಶಕ್ತಿಯಿಂದ ಅನೇಕ ಯೋಜನೆಗಳನ್ನು ರೂಪಿಸಿದರು.
ಅತ್ಯಂತ ಪ್ರಾಮಾಣಿಕ ರಾಜಕಾರಣಿಯಾಗಿದ್ದ ಅವರು ತಮ್ಮ ಜೀವನದುದ್ದಕ್ಕೂ ಅದನ್ನು ಕಾಪಾಡಿಕೊಂಡು ಬಂದವರು. ಧೀಮಂತ ನಾಯಕರಾಗಿದ್ದ ಅವರ ಪುಣ್ಯತಿಥಿ ಆಚರಿಸಿ ಗೌರವ ಸಲ್ಲಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅವರ ಬದುಕು ನಮಗೆ ಮಾರ್ಗದರ್ಶನ ನೀಡಲಿ ಎಂದರು. ನಿಜಲಿಂಗಪ್ಪನವರು ಈ ನಾಡಿಗೆ ಹಾಗೂ ದೇಶಕ್ಕೆ ಮಾಡಿದ ಸೇವೆಯನ್ನು ನಾವೆಲ್ಲರೂ ಸ್ಮರಿಸಬೇಕು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw