ಸಾಲಬಾಧೆ: ಮಗಳನ್ನು ಕೊಂದು ತಂದೆ ಆತ್ಮಹತ್ಯೆ
ಆನೇಕಲ್: ಸಾಲಬಾಧೆ ತಾಳಲಾರದೇ ತಂದೆ ತನ್ನ ಏಳು ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ಬೊಮ್ಮಸಂದ್ರದಲ್ಲಿ ನಡೆದಿದೆ.
ಕೋಲಾರದ ಬಂಗಾರಪೇಟೆ ಮೂಲದ ವಿಜಯಕುಮಾರ್ (39) ನೇಣಿಗೆ ಶರಣಾಗಿದ್ದು, ಈತ ನೇಣಿಗೆ ಶರಣಾಗುವ ಮುನ್ನ ತನ್ನ ಮಗಳನ್ನು ಉಸಿರುಗಟ್ಟಿಸಿ ಕೊಂದಿದ್ದಾನೆ. ವೆಲ್ಡರ್ ವೃತ್ತಿ ಮಾಡಿಕೊಂಡಿದ್ದ ವಿಜಯ್ ಕುಮಾರ್, ಬೊಮ್ಮಸಂದ್ರದ ರೇವಣ್ಣ ಎಂಬವರ ಮನೆಯಲ್ಲಿ ಬಾಡಿಗೆಗೆ ಇದ್ದರು. ಮಗಳನ್ನು ಮೊಬೈಲ್ ವೈರ್ ಮತ್ತು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಂದು ಅನಂತರ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚಿನ್ನದಂಗಡಿಯ ಗೋಡೆ ಕೊರೆದು 2 ಕೆ.ಜಿ. ಚಿನ್ನ ಕಳವು ಮಾಡಿದ ಕಳ್ಳರು!
ಈಶ್ವರಪ್ಪ, ಮಲ್ಲಿಕಾರ್ಜುನ ಗೌಡ, ಸೋ ಕಾಲ್ಡ್ ದೇಶಭಕ್ತರ ಮೇಲೆ ಯಾಕೆ ಸುಮೊಟೊ ದಾಖಲಾಗುತ್ತಿಲ್ಲ?
ಉತ್ತರ ಕನ್ನಡದಲ್ಲಿ ಭೂ ಕುಸಿತ: ಗ್ರಾಮಸ್ಥರಲ್ಲಿ ಆತಂಕ
ಪೊಲೀಸ್ ಠಾಣೆ ಎದುರಲ್ಲೇ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ