ಅಪರಾಧದಲ್ಲಿ ಭಾಗಿಯಾಗಿ ಸಮಾಜ ಸೇವೆಯ ಮೂಲಕ ಸಭ್ಯರಂತೆ ವರ್ತಿಸಿದರೆ ಪ್ರಯೋಜನವಿಲ್ಲ: ಎನ್.ಶಶಿಕುಮಾರ್
ಮಂಗಳೂರು: ನಗರದ ಉಳ್ಳಾಲ ವ್ಯಾಪ್ತಿಯಲ್ಲಿ ಮೀನು ವ್ಯಾಪಾರದ ಹಣದ ವಿಚಾರದಲ್ಲಿ ನಡೆದ ಹಲ್ಲೆ ಪ್ರಕರಣದ ಕುರಿತು ಮಂಗಳೂರು ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.
ಈ ಕೇಸಲ್ಲಿ ಬಂಧಿಸಲ್ಪಟ್ಟ ಬಜಾಲ್ ನಿವಾಸಿ ತಲ್ಲತ್ ಯಾನೆ ತಲ್ಹತ್, ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ದಾನ, ಧರ್ಮ, ರಕ್ತದಾನ ಮೂಲಕ ಸಮಾಜ ಸೇವೆ ಸಭ್ಯತೆರಂತೆ ವರ್ತಿಸಿದರೆ ಪ್ರಯೋಜನವಿಲ್ಲ ಎಂದರು.
ಬಜಾಲ್ ನಿವಾಸಿ ತಲ್ಹತ್ ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ ನಗರ ಪೊಲೀಸ್ ಕಮಿನಷರೇಟ್ ವ್ಯಾಪ್ತಿಯಲ್ಲಿ 30ಕ್ಕೂ ಅಧಿಕ ಪ್ರಕರಣಗಳಿವೆ. ಆರೋಪಿ ವಿರುದ್ಧ ಕಂಕನಾಡಿ, ಉಳ್ಳಾಲ, ಕೋಣಾಜೆ, ಬರ್ಕೆ ಠಾಣಾ ವ್ಯಾಪ್ತಿಯಲ್ಲಿ ಕೇಸು ದಾಖಲಾಗಿದೆ. ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲೂ ಕೊಲೆ ಪ್ರಕರಣ ದಾಖಲಾಗಿದೆ ಎಂದರು.
ಆರೋಪಿ ತಲ್ಹತ್ ನಗರದ ಅಡ್ಯಾರ್, ಕಣ್ಣೂರು, ಬಜಾಲ್, ಬಂದರ್, ಉಳ್ಳಾಲ, ದೇರಳಕಟ್ಟೆ, ಫರಂಗಿಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಅಧಿಕ ಮಂದಿಯ ಯುವಕರ ಗ್ಯಾಂಗ್ ಕಟ್ಟಿಕೊಂಡು ಕ್ರಿಮಿನಲ್ ಕೃತ್ಯದಲ್ಲಿ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈತನ ಸಹಚರರ ಮೇಲೂ ನಿಗಾ ಇರಿಸಲಾಗಿದ್ದು, ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.
ಉಳ್ಳಾಲ ಹಲ್ಲೆ ಪ್ರಕರಣದಲ್ಲಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದ್ದು, ಇದರಲ್ಲಿ ನೌಫಲ್ ವಿರುದ್ಧ 15, ಸಿದ್ದೀಕ್ ವಿರುದ್ಧ ಏಳು ಪ್ರಕರಣ ದಾಖಲಾಗಿದೆ. ತಲ್ಹತ್ ಗೆ ಮುಂಬೈ, ಕೇರಳದ ಮಂಜೇಶ್ವರದ ಕ್ರಿಮಿನಲ್ ಗಳ ಜತೆಯೂ ಸಂಪರ್ಕವಿರುವ ಮಾಹಿತಿ ಲಭಿಸಿದ್ದು, ಆ ನಿಟ್ಟಿನಲ್ಲೂ ತನಿಖೆ ಮುಂದುವರಿದಿದೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka