ಸೆಕ್ಸ್ ಸಿಡಿ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ

03/03/2021

ಬೆಂಗಳೂರು: ಸೆಕ್ಸ್ ಸಿಡಿ ಬಿಡುಗಡೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಾಕಷ್ಟು ಚರ್ಚೆಗಳು ರಾಜಕೀಯ ಪ್ರಹಸನದ ಬಳಿಕ ಅವರು ರಾಜೀನಾಮೆ ನೀಡಿದ್ದಾರೆ.

 

ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ರವಾನಿಸಿದ್ದು, ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಒಂದು ಕಾರಣದಿಂದಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

 

ಪ್ರಕರಣದ ಕುರಿತು ಕೂಲಂಕುಷ ತನಿಖೆಯಾಗಬೇಕಿದ್ದು, ತನಿಖೆ ಬಳಿಕ ನಾನು ನಿರ್ದೋಷಿ ಎಂದು ಬಹಿರಂಗವಾದ ಬಳಿಕ ಮತ್ತೆ ನನ್ನ ಸ್ಥಾನ ಪಡೆಯುತ್ತೇನೆ ಎಂದು ಹೇಳಿದ್ದಾರೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

Exit mobile version