ಆಕ್ಸಿಜನ್ ಸಿಲಿಂಡರ್ ದೊರೆಯದೇ ಮೃತಪಟ್ಟ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ
19/04/2021
ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಎಚ್.ಕೆ.ರಮೇಶ್ ಅವರು ಕೊವಿಡ್ ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿರುವ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಏಪ್ರಿಲ್ 13ರಂದು ರಮೇಶ್ ಅವರಿಗೆ ಕೊವಿಡ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ತೀವ್ರ ಉಸಿರಾಟದ ಸಮಸ್ಯೆಯಿಂದ ಸೋಮವಾರ ಬೆಳಗ್ಗೆ 9:30ರ ವೇಳೆಗೆ ಮೃತಪಟ್ಟಿದ್ದಾರೆ.
ರಮೇಶ್ ಅವರಿಗೆ ತೀವ್ರವಾಗಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಸಕಾಲಕ್ಕೆ ಆಕ್ಸಿಜನ್ ಸಿಲಿಂಡರ್ ದೊರೆಯದ ಕಾರಣ ರಮೇಶ್ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸಚಿವರ ಆಪ್ತರಾದ ರಮೇಶ್ ಅವರಿಗೇ ಸಿಲಿಂಡರ್ ಸಿಗಲಿಲ್ಲ ಎಂದಾದರೆ ಇನ್ನು ಜನ ಸಾಮಾನ್ಯರ ಸ್ಥಿತಿ ಏನು ಎಂದು ಜನ ಪ್ರಶ್ನಿಸುವಂತಾಗಿದೆ.