ಸದನದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರು ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದ ಘಟನೆ ಇಂದು ವಿಧಾನಸೌಧದಲ್ಲಿ ನಡೆಯಿತು.
ಹಿಜಾಬ್ ಪ್ರಕರಣದಲ್ಲಿ ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಶಾಸಕರು, ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ರಾಜ್ಯಪಾಲರ ಭಾಷಣದ ಸಂದರ್ಭದಲ್ಲಿ ಮೌನ ಪ್ರತಿಭಟನೆ ನಡೆಸಿದರು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಚ್.ಕೆ.ಪಾಟೀಲ್, ಆರ್.ವಿ.ದೇಶಪಾಂಡೆ, ಕೆ.ಆರ್.ರಮೇಶ್ಕುಮಾರ್ ಸೇರಿದಂತೆ ಕಾಂಗ್ರೆಸ್ ಶಾಸಕರು, ವಿಧಾನಪರಿಷತ್ ಸದಸ್ಯರು ಸದನದಲ್ಲಿ ಕೈಗೆ ಕಪ್ಪು ಬಟ್ಟೆ ಧರಿಸಿರುವ ದೃಶ್ಯ ಕಂಡು ಬಂತು.
ಅಲ್ಲದೆ, ಹಿಜಾಬ್ ಧರಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಸವಾಲು ಹಾಕಿದ್ದ ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜಾ ಫಾತಿಮಾ, ಇವತ್ತು ತಮ್ಮ ಮಾತಿನಂತೆ ಹಿಜಾಬ್ ಧರಿಸಿಯೇ ಸದನಕ್ಕೆ ಆಗಮಿಸಿದ್ದು, ಎಲ್ಲರ ಗಮನ ಸೆಳೆಯಿತು.ಈ ಹಿಂದೆ ಶಾಸಕಿ ಫಾತಿಮಾ, ಹಿಜಾಬ್ ಧರಿಸಿ ಬರುತ್ತೇನೆ, ಧೈರ್ಯ ಇದ್ದರೆ ತಡೆಯಲಿ ಎಂದು ಸವಾಲು ಹಾಕಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಖಾದರ್‌ಗೆ ಮೈಸೂರು ಇತಿಹಾಸ ಗೊತ್ತಿಲ್ಲ: ಸಂಸದ ಪ್ರತಾಪ್ ಸಿಂಹ
ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ: ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು
ಮೋದಿ ಸರ್ಕಾರ ಕಿತ್ತೊಗೆಯುವ ಸಮಯ ಹತ್ತಿರವಾಗಿದೆ: ತೆಲಂಗಾಣ ಸಿಎಂ ಕೆಸಿಆರ್
ಆನ್‍ಲೈನ್ ಗೇಮಿಂಗ್ ನಿಷೇಧ: ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್