1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ತೆರೆಯುವ ಚಿಂತನೆ ಸದ್ಯಕ್ಕಿಲ್ಲ | ಸಚಿವ ಸುಧಾಕರ್ - Mahanayaka
5:20 AM Thursday 19 - September 2024

1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ತೆರೆಯುವ ಚಿಂತನೆ ಸದ್ಯಕ್ಕಿಲ್ಲ | ಸಚಿವ ಸುಧಾಕರ್

sudhakar
04/09/2021

ಬೆಂಗಳೂರು: 1ರಿಂದ 5ನೇ ತರಗತಿವರೆಗೆ ಶಾಲೆಗಳನ್ನು ತೆರೆಯಲು  ಸರ್ಕಾರ ಚಿಂತನೆ ನಡೆಸಿಲ್ಲ ಸದ್ಯಕ್ಕೆ ಪ್ರಾಥಮಿಕ ಶಾಲೆಗಳನ್ನು ತೆರೆಯುವುದು ಬೇಡ ಎಂದು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸದ್ಯ 6ರಿಂದ 8ರವರೆಗಿನ ತರಗತಿಗಳನ್ನು ಟ್ರಯಲ್ ಆಗಿ ಆರಂಭಿಸುತ್ತಿದ್ದೇವೆ.  ಈ ತರಗತಿಗಳ ಆರಂಭಕ್ಕೆ ಸೆ.6ರಿಂದ ನಿಯಮಾನುಸಾರ ಅವಕಾಶ ಕಲ್ಪಿಸಲು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಇನ್ನೂ ಕೋವಿಡ್ ಪಾಸಿಟಿವ್ ದರ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರವೇ ಶಾಲೆಗಳನ್ನು ತೆರೆಯಲಾಗುವುದು ಎಂದು ಸುಧಾಕರ್ ತಿಳಿಸಿದರು.


Provided by

ಕೇರಳದಲ್ಲಿ ಒಂದೆಡೆಯಲ್ಲಿ ಕೊವಿಡ್ ಪ್ರಕರಣಗಳಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ಕೇರಳ, ಕರ್ನಾಟಕ ಗಡಿಪ್ರದೇಶದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮವಹಿಸಿದೆ. ಇನ್ನೊಂದಡೆಯಲ್ಲಿ ಗಣೇಶನ ಹಬ್ಬವನ್ನು ವಿಜೃಂಭಣೆಯಿಂದ ನಡೆಸಲು ಅವಕಾಶ ನೀಡಬೇಕು ಎಂದು ಬಿಜೆಪಿ ನಾಯಕರೇ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಹಬ್ಬಕ್ಕೆ ಹೆಚ್ಚು ಜನ ಸೇರುವುದರಿಂದ ಕೊವಿಡ್ ಪ್ರಕರಣಗಳು ರಾಜ್ಯದಲ್ಲಿ ಮತ್ತೊಮ್ಮೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸುದ್ದಿಗಳು…

ಅಫ್ಘಾನಿಸ್ತಾನದಲ್ಲಿ ಲೈಂಗಿಕ ಕಾರ್ಯಕರ್ತೆಯರಿಗಾಗಿ ಹುಡುಕಾಡುತ್ತಿರುವ ತಾಲಿಬಾನಿಗಳು | ಡೆತ್ ಸ್ಕ್ವಾಡ್ ಆರಂಭ

ಸಾ.ರಾ.ಮಹೇಶ್ ಒಡೆತನದ ಜಾಗಗಳ ಮರು ಸರ್ವೇಗೆ ಆದೇಶ: ರೋಹಿಣಿ ಸಿಂಧೂರಿ ಆರೋಪಗಳಿಗೆ ಮರುಜೀವ

ಜನ್ಮ ನೀಡಿದ ತಂದೆಗೆ ನಡು ಬೀದಿಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಇಬ್ಬರು ಮಕ್ಕಳು!

ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರ ನನಗಿಲ್ಲ, 2023ರ ಚುನಾವಣೆಗಾಗಿ ಕಾಯುತ್ತಿದ್ದೇನೆ | ಬಿ.ವೈ.ವಿಜಯೇಂದ್ರ

“ನಾವು ತಯಾರಾಗಿದ್ದೇವೆ ಎನ್.ಇ.ಪಿ ಬಗ್ಗೆ ಚರ್ಚೆಗೆ ನೀವು ತಯಾರಾಗಿದ್ದೀರಾ?”: ಕ್ಯಾಂಪಸ್ ಫ್ರಂಟ್ ಭಿತ್ತಿಪತ್ರ ಪ್ರದರ್ಶನ

ಭಾಷಣದ ವೇಳೆ ಊಟಕ್ಕೆ ಮುಗಿಬಿದ್ದ ಮಹಿಳಾ ಕಾರ್ಯಕರ್ತೆಯರು | ಬೇಸರ ವ್ಯಕ್ತಪಡಿಸಿದ ದೇವೇಗೌಡರು

ಇತ್ತೀಚಿನ ಸುದ್ದಿ