ಸಹೋದ್ಯೋಗಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ ಹೈಕೋರ್ಟ್ ಜಾಮೀನು

ಬೆಂಗಳೂರು : ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಖಾಸಗಿ ಕಂಪನಿ ವ್ಯವಸ್ಥಾಪಕರೊಬ್ಬರಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಈ ಕುರಿತಂತೆ ಆರೋಪಿ ಎಂ.ಆರ್. ಮನೋಜ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ಸಂತ್ರಸ್ತೆ ಮತ್ತು ಆರೋಪಿಯ ನಡುವಿನ ಸಂಬಂಧವು ಒಪ್ಪಿತವಾಗಿದೆ ಎಂಬುದು ಮೇಲ್ನೋಟಕ್ಕೆ ತಿಳಿದು ಬರುತ್ತದೆ. ಆದ್ದರಿಂದ, ಜಾಮೀನು ಪಡೆಯಲು ಆರೋಪಿ ಅರ್ಹರಾಗಿದ್ದಾರೆ ಎಂದು ಆದೇಶದಲ್ಲಿ ತಿಳಿಸಿದೆ.
ಮನೋಜ್ ಕುಮಾರ್ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ಪದೇ ಪದೇ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅನ್ಯ ಜಾತಿಗೆ ಸೇರಿದ ಕಾರಣಕ್ಕೆ ನನ್ನ ಮದುವೆಯಾಗಲು ನಿರಾಕರಿಸಿದ್ದ. ನಾವಿಬ್ಬರೂ ಒಟ್ಟಿಗಿದ್ದ ಖಾಸಗಿ ಕ್ಷಣಗಳನ್ನು ವಿಡಿಯೊ ಮಾಡಿಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿದ್ದ’ ಎಂದು ಸಂತ್ರಸ್ತೆ ಆರೋಪಿಸಿದ್ದರು. ಈ ಕುರಿತಂತೆ 2021ರ ಸೆಪ್ಟೆಂಬರ್ 6ರಂದು ನಗರದ ಬ್ಯಾಟರಾಯನಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಅತ್ಯಾಚಾರ, ಜೀವ ಬೆದರಿಕೆ, ಕೊಲೆಯತ್ನ ಮತ್ತು ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿತ್ತು. ವಿಚಾರಣೆ ನಡೆಸಿದ್ದ ನಗರದ 70ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿ 2021ರ ಡಿಸೆಂಬರ್ 12ರಂದು ಆದೇಶಿಸಿತ್ತು. ಜಾಮೀನು ಕೋರಿ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿಷಕಾರಿ ಹಾವನ್ನು ಕೊರಳಿಗೆ ಸುತ್ತಿ ಮುತ್ತಿಟ್ಟವನ ಸ್ಥಿತಿ ಚಿಂತಾಜನಕ
ಹೆಂಡ್ತಿ ಆಸೆ ತೀರಿಸಲಾಗದೆ ಪತಿ ಆತ್ಮಹತ್ಯೆ
ಅಧಿಕಾರಕ್ಕಾಗಿ ಮಠ ಕಟ್ಟುತ್ತಿದ್ದಾರೆ: ಸಚಿವ ನಿರಾಣಿ ವಿರುದ್ಧ ಬಿಜೆಪಿ ಶಾಸಕ ಯತ್ನಾಳ್ ವ್ಯಂಗ್ಯ
ಸೇತುವೆಯಿಂದ ಕೆಳಗೆ ಬಿದ್ದ ಕಾರು: ಶಾಸಕನ ಮಗ ಸೇರಿ ಏಳು ವೈದ್ಯಕೀಯ ವಿದ್ಯಾರ್ಥಿಗಳು ಸಾವು
‘ಸ್ಟುಪಿಡ್ ಸನ್ ಆಫ್ ಎ..’ ಎಂದು ಪತ್ರಕರ್ತನಿಗೆ ನಿಂದಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್