ಆಸ್ತಿಗಾಗಿ ಸಹೋದರರ ಜಗಳ: ಕಟ್ಟಡದ ಮೇಲಿನಿಂದ ಓರ್ವ ಸಹೋದರನನ್ನು ಕೆಳಕ್ಕೆಸೆಯಲು ಯತ್ನ

ಬೆಳಗಾವಿ: ಆಸ್ತಿ ವಿಚಾರವಾಗಿ ಸಹೋದರರ ನಡುವೆ ನಡೆದ ಗಲಾಟೆಯಲ್ಲಿ ಅಣ್ಣಂದಿರು ಸೇರಿ ಓರ್ವ ಸಹೋದರನನ್ನು ಕಟ್ಟಡದಿಂದ ಕೆಳಕ್ಕೆಸೆಯಲು ಯತ್ನಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.
ವರದಿಗಳ ಪ್ರಕಾರ, ಆಸ್ತಿ ವಿಚಾರವಾಗಿ ಅಣ್ಣತಮ್ಮಂದಿರಾದ ಶ್ರೀಧರ್, ಸಂದೀಪ್, ಸುನೀಲ್ ನಡುವೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಓರ್ವ ಸಹೋದರನನ್ನು ಕಟ್ಟಡಡಿಂದ ತಳ್ಳಲು ಮುಂದಾಗಿದ್ದಾರೆ. ಈ ವೇಳೆ ಕೆಲವರು ಅವರನ್ನು ತಡೆದಿದ್ದಾರೆ. ಕೊನೆಗೂ ಆತ ರಾಡ್ ನ್ನು ಹಿಡಿದುಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಬೆಳಗಾವಿಯ ಖಡೇಬಜಾರ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಇನ್ನೂ ಸಹೋದರರ ಗಲಾಟೆಯನ್ನು ಬಿಡಿಸಲು ಹೋದವರಿಗೂ ಏಟು ಬಿದ್ದಿದೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು 8088059494 ನಂಬರ್ ನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಸೇರಿಸಿಕೊಳ್ಳಿ
ಇನ್ನಷ್ಟು ಸುದ್ದಿಗಳು…
ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಮಾಡಿ, ಬೆದರಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ
ಸೋದರಳಿಯನ ಪತ್ನಿಗೆ ಹಲ್ಲೆ, ವಿಷ ಕುಡಿಸಲು ಯತ್ನ: ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ
ಎನ್ ಇಪಿ ವಿರೋಧಿಸಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಯತ್ನ | ಪೊಲೀಸರಿಂದ ಲಾಠಿ ಚಾರ್ಜ್
ತಂದೆಯನ್ನು ಕೊಂದು, ಕುಡಿದು ಬಿದ್ದು ಸತ್ತ ಎಂದು ನಂಬಿಸಿದ ಪುತ್ರ | ಪುತ್ರನ ಹೈಡ್ರಾಮ ಬಯಲಾಗಿದ್ದು ಹೇಗೆ ಗೊತ್ತಾ?
ಮಂಗಳೂರಿನಲ್ಲೂ ದೇವಸ್ಥಾನ, ಮಸೀದಿ, ಧಾರ್ಮಿಕ ಕಟ್ಟಡಗಳ ತೆರವಿಗೆ ಸಿದ್ಧತೆ?
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾರಂಭಕ್ಕೆ ಕೊನೆಗೂ ಗ್ರೀನ್ ಸಿಗ್ನಲ್
ಬಿರಿಯಾನಿ ತಿಂದ ಕೆಲವೇ ಹೊತ್ತಿನಲ್ಲಿ ಬಾಲಕಿ ಸಾವು: 15 ದಿನಗಳ ಹಳೆಯ ಕೋಳಿ ಮಾಂಸದಲ್ಲಿ ಬಿರಿಯಾನಿ ತಯಾರಿಕೆ!