ಸೈಫ್ ಅಲಿ ಖಾನ್ ಗೆ ಚೂರಿ ಇರಿತ ಪ್ರಕರಣ: ಆರೋಪಿಗಳಿಗೆ ಗುರುತಿನ ಪರೇಡ್ ನಡೆಸಿದ ಮುಂಬೈ ಪೊಲೀಸರು

ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚೂರಿ ಇರಿತ ಪ್ರಕರಣದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಗಾಗಿ ಮುಂಬೈ ಪೊಲೀಸರು ಬುಧವಾರ ಆರ್ಥರ್ ರೋಡ್ ಜೈಲಿನಲ್ಲಿ ಗುರುತಿನ ಪರೇಡ್ ನಡೆಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಕಳ್ಳತನ ಮಾಡುವ ಉದ್ದೇಶದಿಂದ ಸೈಫ್ ಅವರ ನಿವಾಸಕ್ಕೆ ಪ್ರವೇಶಿಸಿದ ಶೆಹಜಾದ್ ನನ್ನು ಘಟನೆಯ ಸಮಯದಲ್ಲಿ ಹಾಜರಿದ್ದ ಸಾಕ್ಷಿಗಳು ಗುರುತಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸಕಾರಾತ್ಮಕ ಮುಖ ಗುರುತಿಸುವಿಕೆ ಪರೀಕ್ಷೆ ಸೇರಿದಂತೆ ಅಪರಾಧದೊಂದಿಗೆ ಆರೋಪಿಯನ್ನು ಸಂಪರ್ಕಿಸುವ ಬಲವಾದ ಪುರಾವೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ತಿಂಗಳು, ಸೈಫ್ ಮೇಲೆ ಆರೋಪಿಯು ಹಲ್ಲೆ ನಡೆಸಿದ್ದ. ಆರೋಪಿತನನ್ನು ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಎಂದು ಗುರುತಿಸಲಾಗಿತ್ತು. ಅವನು ಕಳ್ಳತನ ಮಾಡುವ ಉದ್ದೇಶದಿಂದ ನಟರ ಮನೆಗೆ ಪ್ರವೇಶಿಸಿದ್ದ ಎಂದು ಆರೋಪಿಸಲಾಗಿದೆ. ಹಿಂಸಾತ್ಮಕ ಮುಖಾಮುಖಿಯ ಸಮಯದಲ್ಲಿ, ಸೈಫ್ ಅವರ ಥೊರಾಸಿಕ್ ಬೆನ್ನುಮೂಳೆ ಮತ್ತು ದೇಹದ ಇತರ ಭಾಗಗಳಿಗೆ ಇರಿತದ ಗಾಯಗಳಾಗಿವೆ. ತಕ್ಷಣ ಅವರನ್ನು ಲೀಲಾವತಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj