ಸಾಲ ಮರುಪಾವತಿ ಮಾಡದಿದ್ದಕ್ಕೆ ಯುವಕನನ್ನು ವಿವಸ್ತ್ರಗೊಳಿ ಹಲ್ಲೆ
ಬೆಂಗಳೂರು: 2 ಲಕ್ಷ ರೂ. ಸಾಲ ಮರುಪಾವತಿ ಮಾಡದಿದ್ದಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ನಾಗಿಣಿ ಡ್ಯಾನ್ಸ್ ಮಾಡಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದಯಾಳು ಮಂಜ ಅಲಿಯಾಸ್ ಪುಲಿ ಮಂಜ ಎಂಬಾತನಿಂದ ಸತೀಶ್ ಎಂಬ ಯುವಕ 2 ಲಕ್ಷ ರೂ. ಸಾಲ ಪಡೆದಿದ್ದ. ಕೊಟ್ಟ ಸಾಲ ಮರುಪಾವತಿ ಮಾಡದಿದ್ದರಿಂದ ಕೋಪಗೊಂಡ ಪುಲಿ ಮಂಜ, ಆವಲಹಳ್ಳಿಯ ಮೈದಾನವೊಂದಕ್ಕೆ ಸತೀಶ್ ನನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾನೆ. ಬಳಿಕ ಸತೀಶ್ನನ್ನು ವಿವಸ್ತ್ರಗೊಳಿಸಿ ನಾಗಿಣಿ ಡ್ಯಾನ್ಸ್ ಮಾಡಿಸಿದ್ದಾನೆ. ಇಷ್ಟೇ ಅಲ್ಲದೇ ಕೃತ್ಯವನ್ನು ವಿಡಿಯೋ ಮಾಡಿಕೊಂಡು ವಾಟ್ಸಾಪ್ ಗ್ರೂಪ್ ಗಳಿಗೆ ಶೇರ್ ಮಾಡಿದ್ದಾನೆ.
ಘಟನೆ ಸಂಬಂಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಆವಲಹಳ್ಳಿ ಪೊಲೀಸರು, ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಈ ನಡುವೆ ಆರೋಪಿ ಪರ ವಕೀಲರು ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ಇದೊಂದು ಗಂಭೀರ ಪ್ರಕರಣವಾದ ಕಾರಣ ಜಾಮೀನು ನೀಡಲು ಸಾಧ್ಯವಿಲ್ಲವೆಂದು ಕೋರ್ಟ್ ಹೇಳಿದೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಕಾಶ್ಮೀರ ಫೈಲ್ಸ್ : ಮನುಷ್ಯನೊಳಗಿನ ಪ್ರಾಣಿ ಸ್ವಭಾವ ಇನ್ನಾದರೂ ಬದಲಾಗಲಿ!
ಅಂತಾರಾಷ್ಟ್ರೀಯ ಮೇಳದಲ್ಲಿ ಪರ್ಸ್ ಎಗರಿಸಿದ ನಟಿ ಅರೆಸ್ಟ್!
ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಗೆದ್ದಿದ್ದೇವೆ: ಸಚಿವೆ ಶೋಭಾ ಕರಂದ್ಲಾಜೆ
ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಭಗವಂತ್ ಮಾನ್: ರ್‍ಯಾಲಿಯಲ್ಲಿ ಭಾಗವಹಿಸಲಿರುವ ಕೇಜ್ರಿವಾಲ್