ಕಲೆಕ್ಷನ್ ಪಾರ್ಟಿ: ಸಲೀಂ-ಉಗ್ರಪ್ಪ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ?

ಬೆಂಗಳೂರು: ಮಾಜಿ ಸಂಸದ ಉಗ್ರಪ್ಪ ಹಾಗೂ ಕಾಂಗ್ರೆಸ್ ಮಾಧ್ಯಮ ಕಾರ್ಯದರ್ಶಿ ಸಲೀಂ ಅವರ ನಡುವಿನ ಆಂತರಿಕ ಸಂಭಾಷಣೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಈ ಸಂಬಂಧ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ತಪ್ಪಿಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿಂದು ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಮಾಧ್ಯಮಗೋಷ್ಠಿಯಲ್ಲಿ ಕೆಲವು ಆಂತರಿಕ ಸಂಭಾಷಣೆಯಾಗಿದೆ. ಅವರ ಸಂಭಾಷಣೆಗೂ ನನಗೂ, ಕಾಂಗ್ರೆಸ್ ಗೂ ಯಾವುದೇ ರೀತಿಯ ಸಂಬಂಧಗಳಿಲ್ಲ. ನಾನು ಯಾವುದೇ ಪರ್ಸೆಂಟೇಜ್ ವಿಷಯದಲ್ಲಿ ಭಾಗಿಯಾಗಿಲ್ಲ, ಭಾಗಿಯಾಗಬೇಕಾದ ಅವಶ್ಯಕತೆಯೂ ನನಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಈ ವಿಚಾರವನ್ನು ಪ್ರಸಾರ ಮಾಡಿರೋದು ಮಾಧ್ಯಮಗಳ ತಪ್ಪು ಎಂದು ನಾನು ಹೇಳುವುದಿಲ್ಲ. ನಾವು ಮಾತನಾಡಿದ್ದನ್ನು ಮಾಧ್ಯಮಗಳು ತೋರಿಸಿದ್ದಾರೆ. ಈ ಹಿಂದೆ ಬಿಜೆಪಿಯ ಅನಂತಕುಮಾರ್, ಯಡಿಯೂರಪ್ಪ ಮಾತನಾಡಿದ್ದರು. ಬಸನಗೌಡಪಾಟೀಲ್ ಯತ್ನಾಳ್, ಎಚ್.ವಿಶ್ವನಾಥ್ ಸೇರಿದಂತೆ ಅನೇಕರು ಮಾತನಾಡಿದ್ದಾರೆ. ಅದನ್ನು ಮಾಧ್ಯಮಗಳು ತೋರಿಸಿವೆ ಎಂದರು.
ಸಲೀಂ ಅವರ ಆರೋಪಕ್ಕೂ ನನಗೂ ಯಾವುದೇ ಸಂಬಂಧವಿಲ್ಲ, ರಾಜಕಾರಣದಲ್ಲಿ ಚಪ್ಪಾಳೆ ತಟ್ಟುವವರು, ಕಲ್ಲು ಹೊಡೆಯುವವರು, ಮೊಟ್ಟೆ, ಚಪ್ಪಲಿ ಎಸೆಯುವವರು ಇರುತ್ತಾರೆ. ಧಿಕ್ಕಾರ ಕೂಗುವವರು, ಜೈಕಾರ ಹಾಕುವವರು ಇರುತ್ತಾರೆ. ನನ್ನ ಕುರಿತು ಮಾತನಾಡಿರುವವರು ಯಾವ ವರ್ಗಕ್ಕೆ ಸೇರಿದವರು ಎಂದು ಜನರೇ ತೀರ್ಮಾನಿಸಲಿ ಎಂದರು.
ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಸಿದ್ದರಾಮಯ್ಯ ಅವರು ಮತ್ತು ನನ್ನ ನಡುವೆ ಯಾವುದೇ ಜಗಳ ಇಲ್ಲ. ನಿನ್ನೆ ಹೇಳಿಕೆ ಕೊಟ್ಟವರ ವಿರುದ್ಧ ಕಾಂಗ್ರೆಸ್ ಪಕ್ಷದ ಸಂವಿಧಾನ ಆಧರಿಸಿ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಇನ್ನಷ್ಟು ಸುದ್ದಿಗಳು…
ಡಿ.ಕೆ.ಶಿವಕುಮಾರ್ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಗುಸುಗುಸು ಮಾತು: ಕೊನೆಗೂ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ ಉಗ್ರಪ್ಪ
Uthra murder case: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಕೊಂದವನಿಗೆ ಜೀವಾವಧಿ ಶಿಕ್ಷೆ
ಕೆಮಿಕಲ್ ತುಂಬಿದ ಟ್ಯಾಂಕರ್ ಸ್ಫೋಟ: ರಸ್ತೆಯಲ್ಲಿಯೇ ವ್ಯಾಪಿಸಿದ ಬೆಂಕಿ
ಗುಂಡೇಟಿನಿಂದ ಮಾಲಿಕನ ಪ್ರಾಣ ಉಳಿಸಿದ ಸ್ಮಾರ್ಟ್ ಫೋನ್!
SSLC ಪರೀಕ್ಷೆ ಪಾಸ್ ಆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹ ಧನ
ತುಳುನಾಡಿನ ಅಪ್ರತಿಮ ಅವಳಿ ವೀರರು ಕಾನದ-ಕಟದರು | ಸಂಚಿಕೆ-01
ಕರಂಗೋಲು ಕುಣಿತ: ಅದರ ಸಾಮಾಜಿಕ ಮತ್ತು ಅಲೌಕಿಕ ನೆಲೆಗಳು