ಸಲೀಂ- ಉಗ್ರಪ್ಪ ಸಂಭಾಷಣೆ: ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು | ಡಿ.ವಿ.ಸದಾನಂದ ಗೌಡ
ಬೆಂಗಳೂರು: ಡಿ.ಕೆ.ಶಿವಕುಮಾರ್ ಬಗ್ಗೆ ಸಲೀಂ ಹಾಗೂ ಚರ್ಚೆ ನಡೆಸಿರುವುದನ್ನು ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು ಎಂದು ಸಂಸದ ಡಿ.ವಿ.ಸದಾನಂದ ಗೌಡ(D.V.Sadananda Gowda) ಹೇಳಿದ್ದು, ಪಕ್ಷ ಈಗಾಗಲೇ ಅಧಃಪತನದತ್ತ ಸಾಗಿದೆ. ಪಕ್ಷದ ಕಚೇರಿಯಲ್ಲಿ ಈ ರೀತಿಯಾಗಿ ಮಾತನಾಡಿದ್ದಾರೆ ಎಂದು ಹೇಳಿದರು.
ಕಮಲಾನಗರದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಇಂದು ಘಟನಾ ಸ್ಥಳಕ್ಕೆ ಸಚಿವ ಗೋಪಾಲಯ್ಯ, ಸಂಸದ ಸದಾನಂದ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು ಈ ವೇಳೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಅವರ ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾತಾಡಲು ಇಷ್ಟಪಡಲ್ಲ. ಡಿ.ಕೆ. ಶಿವಕುಮಾರ್ ಬಗ್ಗೆ ಅವರ ಪಕ್ಷದವರೇ ಮಾತಾಡುತ್ತಿರುವುದು ನೋಡಿದರೆ ಅವರ ಪಕ್ಷದಲ್ಲೇ ಷಡ್ಯಂತ್ರ ನಡೆಯುತ್ತಿರುವುದು ಗೊತ್ತಾಗುತ್ತದೆ ಎಂದು ಸದಾನಂದ ಗೌಡ ಹೇಳಿದರು.
ಕಾಂಗ್ರೆಸ್ ಈಗಾಗಲೇ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಂತಾ ವರ್ಟಿಕಲ್ ಆಗಿ ಡಿವೈಡ್ ಆಗಿದೆ. ಅದಕ್ಕೆ ಪ್ರೂಫ್ ಗಳು ದಿನಾ ಒಂದೊಂದು ಕಾಣ್ತಾ ಇದೆ ಎಂದು ಅವರು ಹೇಳಿದರು.
ಮುನ್ನೆಚ್ಚರಿಕೆ ವಹಿಸದಿದ್ದರೆ ಅನಾಹುತ ಆಗ್ತಿತ್ತು!
ಕಮಲಾನಗರದಲ್ಲಿ ಕಟ್ಟಡ ಕುಸಿದ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಜನರ ಸ್ಥಳಾಂತರ ಮಾಡಲಾಗಿತ್ತು. ಇಲ್ಲದಿದ್ದರೆ ಮತ್ತಷ್ಟು ಅನಾಹುತ ಸಂಭವಿಸುತ್ತಿತ್ತು. ಬಿಬಿಎಂಪಿ ಅಧಿಕಾರಿಗಳು ಕೇವಲ ನೋಟಿಸ್ ಕೊಡುವುದಲ್ಲ. ಒಂದು ರೌಂಡ್ ಇಂತಹ ಕಟ್ಟಡಗಳನ್ನು ಗುರುತಿಸಬೇಕು. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತರ ಜೊತೆ ಮಾತನಾಡುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಇನ್ನಷ್ಟು ಸುದ್ದಿಗಳು…
SSLC ಪರೀಕ್ಷೆ ಪಾಸ್ ಆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹ ಧನ
ಕೋಟಿಗೊಬ್ಬ-3 ಬಿಡುಗಡೆಗೆ ಯಾರಿಂದ ತೊಂದರೆ ಆಯ್ತು ಅಂತ ಗೊತ್ತಿದೆ | ವಿಡಿಯೋ ಶೇರ್ ಮಾಡಿದ ಕಿಚ್ಚ ಸುದೀಪ್
ನೈತಿಕ ಪೋಲಿಸ್ ಗಿರಿ: ಸಿಎಂ ಹೇಳಿಕೆ ದುಷ್ಕ್ರತ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತಿದೆ | ಸಿಪಿಐಎಂ ಆಕ್ರೋಶ
ಸಂಘ ಪರಿವಾರದ ಓಲೈಕೆಗೆ ಸಿಎಂ ಬೊಮ್ಮಾಯಿ ಈ ಮಟ್ಟಕ್ಕೆ ಇಳಿಯಬಾರದಿತ್ತು | ಸಿದ್ದರಾಮಯ್ಯ ಆಕ್ರೋಶ
ಪರಿವರ್ತನೆ ಬಯಸುವ ಚಲನಶೀಲ ಮನುಷ್ಯರಿಗೆಲ್ಲರಿಗೂ 65ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಎಂಬ ಫೋಟೋ ವೈರಲ್: ದೂರು ದಾಖಲು
ಮದುವೆ ಆದರೂ ‘ಸಿಂಗಲ್’ ಆಗಿರುವ ಮೋದಿ ಬಗ್ಗೆ ಮಾತನಾಡುವ ಧೈರ್ಯ ನಿಮಗಿದೆಯೇ? | ಸುಧಾಕರ್ ಗೆ ಕುಟುಕಿದ ಕಾಂಗ್ರೆಸ್