ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಗೆ ಕಚ್ಚಿದ ಹಾವು! - Mahanayaka
7:40 AM Thursday 12 - December 2024

ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಗೆ ಕಚ್ಚಿದ ಹಾವು!

salman khan
26/12/2021

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಚ್ಚಿದ ಘಟನೆ ಅವರ ಪನ್ವೇಲ್ ನಲ್ಲಿರುವ ಫಾರ್ಮ್ ಹೌಸ್ ನಲ್ಲಿ ನಡೆದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ.

ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ. ಫಾರ್ಮ್ ಹೌಸ್ ನಲ್ಲಿದ್ದ ವೇಳೆ ಅವರ ಕೈಗೆ ಹಾವೊಂದು ಕಚ್ಚಿತ್ತು. ತಕ್ಷಣವೇ ಅವರನ್ನು  ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ  ಆ್ಯಂಟಿ ವೆನಮ್(anti-venom) ಔಷಧಿಯನ್ನು ನೀಡಲಾಗಿದ್ದು, ಬಳಿಕ ಡಿಸ್ಚಾರ್ಜ್ ಮಾಡಲಾಗಿದೆ.

ಸದ್ಯ ಸಲ್ಮನ್ ಖಾನ್ ಆರೋಗ್ಯಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳಲಾಗಿದೆ. ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದ ಸಲ್ಮಾನ್ ಖಾನ್ ಅವರನ್ನು ಬೆಳಗ್ಗೆ 9 ಗಂಟೆಯ ವೇಳೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಇದೀಗ ಅವರ ಆರೋಗ್ಯ ಸಹಜವಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

15ರಿಂದ 18 ವರ್ಷದೊಳಗಿನವರಿಗೆ ಜನವರಿ 3ರಿಂದ ಲಸಿಕೆ ವಿತರಣೆ ಆರಂಭ | ಪ್ರಧಾನಿ ಮೋದಿ

ಒಮಿಕ್ರಾನ್ ಭೀತಿ:  ಡಿಸೆಂಬರ್ 28ರಿಂದ 10 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ!

ಅತಿಥಿ ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳು: ಹೋರಾಟಕ್ಕೆ ಕ್ಯಾಂಪಸ್ ಫ್ರಂಟ್ ತೀರ್ಮಾನ

ಮುಸ್ಲಿಮರನ್ನು, ಕ್ರೈಸ್ತರನ್ನು ಘರ್ ವಾಪಸಿ ಮಾಡದೇ ಬೇರೆ ದಾರಿಯಿಲ್ಲ | ಸಂಸದ ತೇಜಸ್ವಿ ಸೂರ್ಯ

ಕಳೆದ 7 ವರ್ಷಗಳಿಂದ ಮೋದಿ ಸರ್ಕಾರ ‘ಉತ್ತಮ ಆಡಳಿತ’ ನೀಡುತ್ತಿದೆ | ಅಮಿತ್ ಶಾ

ಇತ್ತೀಚಿನ ಸುದ್ದಿ