ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಸೊಸೆ ಬಿಜೆಪಿಗೆ ಸೇರ್ಪಡೆ
ನವದೆಹಲಿ: ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಅಪರ್ಣಾ ಯಾದವ್ ಅವರು ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಬಳಿಕ ಮಾತನಾಡಿರುವ ಅಪರ್ಣಾ ಯಾದವ್, ಬಿಜೆಪಿಗೆ ತುಂಬಾ ಕೃತಜ್ಞಳಾಗಿದ್ದೇನೆ.
ರಾಷ್ಟ್ರವೇ ಯಾವಾಗಲೂ ಮೊದಲು. ನಾನು ಪ್ರಧಾನಿ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ. ಸ್ವಚ್ಛ ಭಾರತ್ ಮಿಷನ್, ಮಹಿಳೆಯರ ಕಲ್ಯಾಣ, ಉದ್ಯೋಗ ಸೇರಿದಂತೆ ಬಿಜೆಪಿಯ ಇತರೆ ಕಾರ್ಯಗಳು ಮತ್ತು ಯೋಜನೆಗಳಿಂದ ನಾನು ಪ್ರಭಾವಿತನಾಗಿದ್ದೇನೆ. ಪಕ್ಷಕ್ಕಾಗಿ ಪೂರ್ಣ ಸಾಮರ್ಥ್ಯದೊಂದಿಗೆ ಕೆಲಸ ಮಾಡುತ್ತೇನೆಂದು ಹೇಳಿದರು.
ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಅಪರ್ಣಾ ಯಾದವ್ ಅವರು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಸಮಾಜವಾದಿ ಪಕ್ಷಕ್ಕೆ ತೀವ್ರ ಹಿನ್ನಡೆಯುಂಟಾಗುವಂತೆ ಮಾಡಿದೆ.
ಇತ್ತೀಚೆಗೆ ಮೂವರು ರಾಜ್ಯ ಸಚಿವರು ಸೇರಿದಂತೆ ಹಲವು ಹಿಂದುಳಿದ ಜಾತಿಗಳ ನಾಯಕರು ಬಿಜೆಪಿಯನ್ನು ತೊರೆದು ಸಮಾಜವಾದಿ ಪಕ್ಷಕ್ಕೆ ಸೇರಿದ್ದರು. ಇದೀಗ ಮುಲಾಯಂ ಅವರ ಸೊಸೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
2023ರ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ: ಕಲ್ಲಿನಾಥ ಸ್ವಾಮೀಜಿ ಭವಿಷ್ಯ
ಅಮೆರಿಕಕ್ಕೆ ವಿಮಾನಯಾನ ಸೇವೆ ರದ್ದುಗೊಳಿಸಿದ ಏರ್ ಇಂಡಿಯಾ
ನಾರಾಯಣ ಗುರುಗಳ ಸ್ತಬ್ಧಚಿತ್ರ ವಿವಾದ : ಸಿದ್ದರಾಮಯ್ಯ ಕಿಡಿ
ಮಂಗಳೂರು: ತ್ಯಾಜ್ಯ ವಿಲೇವಾರಿ ವಿಳಂಬ; ಪಾಲಿಕೆ ಆಯುಕ್ತರಿಗೆ ಹೈಕೋರ್ಟ್ ಎಚ್ಚರಿಕೆ
ದಾಳಿಂಬೆಯ ಸೇವನೆಯಿಂದ ಸಿಗಲಿದೆ ಅದ್ಭುತ ಪ್ರಯೋಜನಗಳು