ಸಂಬಂಧಿಕರ ಮುಂದೆಯೇ ಸಿಪಿಎಂ ಕಾರ್ಯಕರ್ತನ ಭೀಕರ ಕೊಲೆ - Mahanayaka
9:19 AM Thursday 12 - December 2024

ಸಂಬಂಧಿಕರ ಮುಂದೆಯೇ ಸಿಪಿಎಂ ಕಾರ್ಯಕರ್ತನ ಭೀಕರ ಕೊಲೆ

cpm haridas
21/02/2022

ಕಣ್ಣೂರು :  ಸಂಬಂಧಿಕರ ಮುಂದೆಯೇ ಸಿಪಿಎಂ ಕಾರ್ಯಕರ್ತನನ್ನು ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿ ನಡೆದಿದ್ದು,  ಆರೆಸ್ಸೆಸ್, ಬಿಜೆಪಿ ಮುಖಂಡರ ವಿರುದ್ಧ ಶಂಕೆ ವ್ಯಕ್ತವಾಗಿದೆ.

ರಾತ್ರಿ ಕೆಲಸ ಮುಗಿಸಿ ರಾತ್ರಿ ತನ್ನ ಸ್ನೇಹಿತರೊಂದಿಗೆ ಬೈಕ್ ನಲ್ಲಿ ಬಂದಿದ್ದ ಸಿಪಿಎಂ ಕಾರ್ಯಕರ್ತ ಹರಿದಾಸ್ ಅವರನ್ನು ಬೈಕ್ ನಲ್ಲಿ ಫಾಲೋ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ. ಹರಿದಾಸ್ ತನ್ನ ಮನೆಯ ಸಮೀಪ  ಸ್ನೇಹಿತರ ಬೈಕ್ ನಿಂದ ಇಳಿದು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಹರಿದಾಸ್ ಅವರ ಬೊಬ್ಬೆ ಕೇಳಿ ಸ್ಥಳಕ್ಕೆ ಕುಟುಂಬಸ್ಥರು ಓಡಿ ಬಂದಿದ್ದು, ಅವರನ್ನು ರಕ್ಷಣೆ ಮಾಡಲು ಸಹೋದರ ಸೂರ ಎಂಬವರು ಯತ್ನಿಸಿದ್ದಾರೆ. ಆದರೆ ದುಷ್ಕರ್ಮಿಗಳು ಅವರ ಮೇಲೆಯೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಹರಿದಾಸ್ ಅವರ ಕಾಲನ್ನು ಕತ್ತರಿಸಿ ದೇಹದಿಂದ ಬೇರ್ಪಡಿಸಲಾಗಿತ್ತು. ಹರಿದಾಸ್ ಅವರನ್ನು ಆಸ್ಪತ್ರೆಗೆ ಕರೆದೊಯ್ದ ವೇಳೆ ಅವರ ಕಾಲು ಪತ್ತೆಯಾಗಿರಲಿಲ್ಲ ಎನ್ನಲಾಗಿದೆ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.

ಪುನ್ನೊಲಿ ದೇವಸ್ಥಾನದ ಜಾತ್ರೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಸಿಪಿಎಂ ನಡುವೆ ಘರ್ಷಣೆ ಇತ್ತು ಎನ್ನಲಾಗಿದೆ. ಈ ವಿಚಾರವಾಗಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನಾ ಸಭೆಯಲ್ಲಿ ತಲಶ್ಶೇರಿ ಕೊಮ್ಮಲ್ ವಾರ್ಡ್ ನ ಕೌನ್ಸಿಲರ್ ವಿಜೇತ್  ಹತ್ಯೆಗೆ ಕರೆ ನೀಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಭಾಷಣದ ತುಣುಕು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಊಟ ಬಡಿಸುವುದು ತಡವಾಗಿದೆ ಎಂದು ಮದುವೆ ನಿರಾಕರಿಸಿ ವರ ಮಂಟಪದಿಂದ ಎಸ್ಕೇಪ್

ಮೃತ ಹರ್ಷನ ವಿರುದ್ದ ನಾಲ್ಕು ಪ್ರಕರಣ ದಾಖಲಾಗಿದ್ದವು

ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು

ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ: ವಾಹನಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

 

ಇತ್ತೀಚಿನ ಸುದ್ದಿ